LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯುಜಿಸಿ ನಿಯಮಗಳಿಗೆ ತಡೆಯಾಜ್ಞೆ ತೆರವಿಗೆ ಒತ್ತಾಯಿಸಿ ಧರಣಿ

ಬಳ್ಳಾರಿ,ಫೆ.10: ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಸಮಾನತೆ ಮತ್ತು ರಕ್ಷಣೆಯನ್ನು ಒದಗಿಸುವ ಉದ್ದೇಶದಿಂದ ತಂದಿರುವ ನಿಯಮಾವಳಿಗಳಿಗೆ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತಕ್ಷಣ ತೆರವುಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾ¬ರಿಗಳ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕವು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ, ಮೆರವಣಿಗೆ ಹಾಗೂ ಧರಣಿ ನಡೆಸಬೇಕೆಂದು ಸೂಚಿಸಿದ ಹಿನ್ನೆಲೆಯಲ್ಲಿ ಡಿಎಸ್‌ಎಸ್ ಬಳ್ಳಾರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಇಂದು ಪ್ರತಿಭಟನಾ ಧರಣಿ ನಡೆಸಿದರು.

ಪ್ರತಿಭಟನೆಯ ನಂತರ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಮಾನವ ಸಂಪನ್ಮೂಲ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳಲ್ಲಿ ಎದುರಿಸುತ್ತಿರುವ ಜಾತಿ ಆಧಾರಿತ ಕಿರುಕುಳ, ಭೇದಭಾವ ಹಾಗೂ ಸಾಂಸ್ಥಿಕ ದೌರ್ಜನ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನ ಜಾರಿಯಾಗಿ ೭೫ ವರ್ಷಗಳು ಪೂರ್ಣಗೊಂಡಿದ್ದರೂ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನೂ ಜಾತಿ ತಾರತಮ್ಯ ಮುಂದುವ¬ರಿದಿರುವುದು ಗಂಭೀರ ಸಂಗತಿಯೆAದು ಪ್ರತಿಭಟನಾಕಾರರು ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ (೨೦೧೬), ಮುಂಬೈ ವೈದ್ಯಕೀಯ ವಿದ್ಯಾರ್ಥಿನಿ ಪಾಯಲ್ (೨೦೧೯), ಬಾಂಬೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ದರ್ಶನ್ ಸೊಳಂಕಿ (೨೦೨೩) ಸೇರಿದಂತೆ ದೇಶದಲ್ಲಿ ಅನೇಕ ದಲಿತ ವಿದ್ಯಾರ್ಥಿಗಳು ಸಾಂಸ್ಥಿಕ ದೌರ್ಜನ್ಯಕ್ಕೆ ಬಲಿಯಾಗಿದ್ದಾರೆ ಎಂದು ಹೇಳಿದರು. ಕೇಂದ್ರ ಸರ್ಕಾರವೇ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅಂಕಿ-ಅAಶಗಳ ಪ್ರಕಾರ ಐಐಟಿ, ಐಐಎಂ, ಎನ್‌ಐಟಿ ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ೨೨ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಅಧಿಕೃತ ದಾಖಲೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಆರ್‌ಎಸ್‌ಎಸ್, ಎಬಿವಿಪಿ ಸೇರಿದಂತೆ ಕೋಮುವಾದಿ, ಜಾತಿವಾದಿ ಸಂಘಟನೆಗಳ ಹಸ್ತಕ್ಷೇಪದಿಂದ ಶೈಕ್ಷಣಿಕ ವಾತಾವರಣ ಹದಗೆಡುತ್ತಿದ್ದು, ಶೋಷಿತ ಸಮುದಾಯದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣಗಳು ಹಾಗೂ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇಂತಹ ಪರಿಸ್ಥಿತಿಯನ್ನು ತಡೆಯಲು Uಉಅ ತಂದಿರುವ ‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ’ ಕುರಿತ ನಿಯಮಗಳು ಅತ್ಯಂತ ಅಗತ್ಯವಾಗಿವೆ ಎಂದರು.

ಸುಪ್ರೀಂಕೋರ್ಟ್ ಈ ನಿಯಮಗಳಿಗೆ ತಡೆ ನೀಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಸರ್ಕಾರವೇ ಒದಗಿಸಿರುವ ಜಾತಿ ದೌರ್ಜನ್ಯಗಳ ಅಂಕಿ - ಅಂ± ÀU À¼ À£ À Ä

ಪರಿಗಣಿಸದೇ ತಡೆ ನೀಡಿರುವುದು ದುರಂತದ ಸಂಗತಿ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ದಲಿತ ಹಾಗೂ ಬುಡಕಟ್ಟು ವಿದ್ಯಾರ್ಥಿಗಳಿಗೆ ಭಯಮುಕ್ತ ಶೈಕ್ಷಣಿಕ ವಾತಾವರಣ ನಿರ್ಮಿಸಲು ‘ರೋಹಿತ್ ವೇಮುಲ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎ.ಮಾನಯ್ಯನವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಡಿಎಸ್‌ಎಸ್‌ನ ಜಿಲ್ಲಾ ಸಂಚಾಲಕ ಹೆಚ್.ಬಿ.ಗಂಗಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ದೇವದಾಸ್ ಕೆ., ಕೊಳಗಲ್ಲು ಮಲ್ಲಯ್ಯ, ಹೆಚ್.ಆಂಜನೇಯ್ಯ ಹಾಗೂ ಡಿಎಸ್‌ಎಸ್ ಮುಖಂಡರಾದ ಬಿ.ರಮೇಶ್ ಬಿಸಿಲಹಳ್ಳಿ, ಟಿ.ಎಂ.ಎಲ್ಲಸ್ವಾಮಿ, ಬೆಳಗಲ್ಲು ಹುಲುಗಪ್ಪ, ಜಿ.ಪಂಪಾಪತಿ, ಮಹೇಶ್ ಇಂದಿರಾನಗರ ಸೇರಿದಂತೆ ಡಿಎಸ್‌ಎಸ್‌ನ ಜಿಲ್ಲಾ, ತಾಲೂಕು ಹಾಗೂ ರಾಜ್ಯಮಟ್ಟದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್