LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ ಡಿಎಚ್ ಒ ಡಾ. ಸಂಪತ್ತಕುಮಾರ ಗುಣಾರಿ ಅಭಿಮತ

ವಿಜಯಪುರ,ಜು.೧೪: ತಾಯಿ ಮರಣ ಪ್ರಮಾಣ ಮತ್ತು ತೊಂದರೆ ತಡೆಗಟ್ಟುವುದು  ವಿಶ್ವ ಜನಸಂಖ್ಯೆ  ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಸಂಪತ್ತ ಗುಣಾರಿ, ಹೇಳಿದರು. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ನಸಿಂಗ್ ಕಾಲೇಜಿನ ಆವರಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವೆ ಆರೋಗ್ಯಕರ ಅಂತರ ಕಾಪಾಡುವವರಿಂದ ತಾಯಿ ಮತ್ತು ಮಕ್ಕಳ ಆರೋಗ್ಯ ವೃದ್ಧಿಸುವದರೊಂದಿಗೆ ಅನಗತ್ಯ ಗರ್ಭಧಾರಣೆಯನ್ನು ತಡೆಗಟ್ಟಬಹುದಾಗಿದೆ ಎಂದ ಅವರು, ಮಹಿಳೆಯರ ಸಂತಾನೋತ್ಪತ್ತಿ ಆರೋಗ್ಯದ ಗುಣಮಟ್ಟ ಸುಧಾರಣೆ ಗರ್ಭಧಾರಣೆಗೆ ಆರೋಗ್ಯಕರ ಸಮಯ ಮತ್ತು ಗರ್ಭಧಾರಣೆಗಳ ನಡುವಿನ ಅಂತರವನ್ನು ಉತ್ತೇಜಿಸಬೇಕಿದೆ ಎಂದರು.
ಭಾರತ ಸ್ವಾತಂತ್ರ್ಯ ಪಡೆದುಕೊಂಡಾಗ ದೇಶದ ಜನಸಂಖ್ಯೆ ಕೇವಲ ೩೩ ಕೋಟಿ ಇತ್ತು. ಕಳೆದ ೭೯ ವರ್ಷಗಳಲ್ಲಿ ಜನಸಂಖ್ಯೆಯ ವಿಷಯದಲ್ಲಿ ಹಲವು ಮಹತ್ವದ ಬದಲಾವಣೆ ಮಾಡಲಾಗಿದೆ. ಪ್ರಸ್ತುತ ಭಾರತ ಜನಸಂಖ್ಯೆ ೧೪೪ ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿದೆ. ಆದ್ದರಿಂದ ವಿಶ್ವದಲ್ಲಿ ಅತ್ಯಧಿಕ ಜನಸಂಖ್ಯೆ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಿದೆ. ಆದರೆ ಇತ್ತಿಚಿನ ವರ್ಷಗಳಲ್ಲಿ ಭಾರತ ದೇಶದ ಜನನ ದರ ೧.೯೪ ಕ್ಕೆ ಕುಸಿದಿದೆ. ಇದು ಭವಿಷ್ಯದಲ್ಲಿ ಜನಸಂಖ್ಯೆಯ ಆಸಮತೋಲನಕ್ಕೆ ಕಾರಣವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿ, ವೃದ್ಧರ ಸಂಖ್ಯೆ ಹೆಚ್ಚಳಗೊಂಡು ದುಡಿಯುವ ಕೈಗಳ ಸಂಖ್ಯೆ ಕಡಿಮೆಯಾಗುತ್ತಿದೆ.ಇದು ಮುಖ್ಯವಾಗಿ ದೇಶಕ್ಕೆ ಆರ್ಥಿಕ ದೃಷ್ಟಿಯಿಂದ ಅಪಾಯವಾಗುತ್ತದೆ ಎಂದರು. ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಕುಟುಂಬ ಕಲ್ಯಾಣ ಕಾರ್ಯಕ್ರಮಗಳಾದ ಶಾಶ್ವತ ಹಾಗೂ ತಾತ್ಕಾಲಿಕ ವಿಧಾನಗಳನ್ನು ಮಹಿಳೆಯರಿಗೆ ಹಾಗೂ ಪುರುಷರಿಗೆ ಜಿಲ್ಲೆಯ ಎಲ್ಲ ತಾಲೂಕಾ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪಿಪಿಆಯುಸಿಡಿ  ಅಂತರ ಚುಚ್ಚುಮದ್ದು, ಇಂಪ್ಲಾಂಟ ರಾಡ್ ಅಳವಡಿಕೆ, ಪುರುಷರಿಗೆ ನಿರೋಧ, ಶಾಶ್ವತ ವಿಧಾನಗಳಾದ ಮಹಿಳೆಯರಿಗೆ ಟ್ಯುಬೆಕ್ಟಮಿ, ಉದರದರ್ಶಕ ಶಸ್ತ್ರಚಿಕಿತ್ಸೆ ಪುರುಷರಿಗೆ, ಪುರುಷ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಎಂದರು. ಅರವಳಿಕೆ ತಜ್ಞರಾದ ಡಾ. ಸಜ್ಜನ ಮಾತನಾಡಿ, ದೇಶದ ಜನಸಂಖ್ಯೆಯು ೧೪೪ ಕೋಟಿಗೂ ಹೆಚ್ಚಾಗಿ ಅದರಲ್ಲಿ ನಮ್ಮ ದೇಶದಲ್ಲಿ ಯುವಕರೇ ಹೆಚ್ಚಿನ ಪ್ರಮಾಣದಲ್ಲಿದೆ. ಅದರಿಂದ ನಗರೀಕರಣ ನಿರುದ್ಯೋಗ ಮತ್ತು ಪರಿಸರ ಮಾಲಿನ್ಯದಂಥಹ ದೊಡ್ಡ ಸವಾಲುಗಳು ಈಗ ಎದುರಾಗಿವೆ. ಜನಸಂಖ್ಯೆಯು ಈಗ ಕೇವಲ ನಿಯಂತ್ರಣದ ವಿಷಯವಾಗಿರದೇ ನಿರ್ವಹಣೆಯ ವಿಷಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ  ಡಾ. ಎಂ.ಬಿ.ಬಿರಾದಾರ, ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಡಿ ಗುಂಡಬಾವಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಸುರೇಂದ್ರ ಮಾನಕರ, ಶಂಕರ ಚಲವಾದಿ, ರೇಖಾ ದಶವಂತ, ಮೋತಿಲಾಲ ಲಮಾಣಿ, ಎನ್.ಆರ್. ಬಾಗವಾನ, ನಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಾಯಕ ಮಲೇರಿಯಾ ಅಧಿಕಾರಿ ವಿರುಪಾಕ್ಷ ಬಂದಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್