LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಿರ್ದೇಶಕ ಆರ್ ರವೀಂದ್ರ ಸಾರಥ್ಯದಲ್ಲಿ  ಗೋಪಿಲೋಲನಾಗಿ ಮಂಜುನಾಥ್ ಅರಸು

     ಕನ್ನಡದಲ್ಲಿ ಛಲಗಾರ, ಸರ್ಕಾರಿ ಕೆಲಸ ದೇವರ ಕೆಲಸ, ಮನಸ್ಸಿನಾಟ, ಬಂಗಾರದ ಮಕ್ಕಳು, ಮರಾಠಿಯಲ್ಲಿ ಫೆಬ್ರವರಿ 14, ಮಿಷನ್ ಅಂಬ್ಯುಲೆನ್ಸ್ ಸಿನಿಮಾ ನಿರ್ದೇಶಿಸಿರುವ ಆರ್ ರವೀಂದ್ರ ಸದ್ದಿಲ್ಲದೇ ಹೊಸ ಸಿನಿಮಾ ಮುಗಿಸಿದ್ದಾರೆ. ಈ ಚಿತ್ರದ ಟೈಟಲ್ ರಿಲೀಸ್ ಆಗಿದೆ. ರವೀಂದ್ರ ಅವರ ಹೊಸ ಪ್ರಯತ್ನಕ್ಕೆ 'ಗೋಪಿಲೋಲ' ಎಂಬ ಹೆಸರಿಡಲಾಗಿದೆ.


     ಈ ಸಿನಿಮಾದಲ್ಲಿ ಯುವ ಪ್ರತಿಭೆ ಮಂಜುನಾಥ್ ಅರಸು ನಾಯಕನಾಗಿ ನಟಿಸಿದ್ದು, ನಿಮಿಷಾ ಕೆ ಚಂದ್ರ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಉಳಿದಂತೆ ಆಂಕರ್ ಕಂ ನಟಿ ಜಾಹ್ನವಿ, ಎಸ್ ನಾರಾಯಣ್, ಪದ್ಮಾ ವಸಂತಿ, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ನಿರ್ದೇಶಕ ಜೋಸೈಮನ್ ಸೇರಿದಂತ ತಾರಬಳಗವಿದ್ದು, ತೆಲುಗು ನಟ ಸಪ್ತಗಿರಿ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಎಂಟ್ರಿ ಕೊಡುತ್ತಿದ್ದಾರೆ.


     ಛಲಗಾರ, ನೀವು ಕರೆ ಮಾಡಿದ ಚಂದದಾರರು, ರಾಂಧವ ಸಿನಿಮಾ ನಿರ್ಮಿಸಿದ್ದ ಎಸ್ ಆರ್ ಸನತ್ ಕುಮಾರ್ ಚಿತ್ರಕ್ಕೆ ಹಣ ಹಾಕಿದ್ದಾರೆ. ನಾಯಕನಾಗಿರುವ ಮಂಜುನಾಥ್ 'ಗೋಪಿಲೋಲ' ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿಯೂ ಜೊತೆಯಾಗಿದ್ದಾರೆ. ಸಹಜ ಕೃಷಿ ಜೊತೆಗೆ ಪ್ರೇಮಕಥೆ ಎಳೆಯನ್ನು ಹೊಂದಿರುವ ಈ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, . ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.


    ಗೋಪಿಲೋಲ ಸಿನಿಮಾಗೆ ಜಯಂತ್ ಕಾಯ್ಕಿಣಿ, ಕವಿರಾಜ್, ಕೇಶವಚಂದ್ರ ಸಾಹಿತ್ಯ ಬರೆದಿದ್ದು, ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್, ಹೇಮಂತ್, ಅನುರಾಧಾ ಭಟ್, ವಾರಿಜ ಶ್ರೀ, ಶಶಾಂಕ್ ಹಾಗೂ ಗೀತಾ ಭಟ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸದಾಚಾರ್ಯ, ಧನಂಜಯ್ ಹಾಗೂ ಹರಿಕೃಷ್ಣ ನೃತ್ಯ ಸಂಯೋಜನೆ ಹಾಡುಗಳಿಗಿದೆ.


     ಗೋವಾ,ಕೊಡಚಾದ್ರಿ, ಹೊನ್ನಾವರ, ಮಂಗಳೂರು, ಮುರುಡೇಶ್ವರ, ಚಿಕ್ಕಮಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಶೂಟಿಂಗ್ ಮುಗಿಸಿರುವ 'ಗೋಪಿಲೋಲ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸದ್ಯ ಶೀರ್ಷಿಕೆ ಅನಾವರಣ ಮಾಡಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಟೀಸರ್, ಹಾಡುಗಳನ್ನು ಪ್ರೇಕ್ಷಕರ ಎದುರು ಪ್ರಸ್ತುತಪಡಿಸಲಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್