LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೇಂದ್ರ ಬಜೆಟ್​ನಲ್ಲಿ ತಾರತಮ್ಯ ಎಂದು ಆರೋಪಿಸಿ ಸಂಸತ್​ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ ಬಜೆಟ್​ನಲ್ಲಿ ಪ್ರತಿಪಕ್ಷಗಳು ಆಡಳಿತವಿರುವ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್​ ನೇತೃತ್ವದಲ್ಲಿ 'I.N.D.I.A' ಮೈತ್ರಿಕೂಟದ ಸಂಸದರು ಇಂದು ಪ್ರತಿಭಟನೆ ನಡೆಸಿದರು. ಸಂಸತ್ತಿನ ಮಕರ ದ್ವಾರದ ಬಳಿ ನಡೆದ ಪ್ರತಿಭಟನೆಯಲ್ಲಿ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಟಿಎಂಸಿ, ಸಮಾಜವಾದಿ ಪಕ್ಷ, ಡಿಎಂಕೆ ಮತ್ತು ಎಡಪಕ್ಷಗಳ ಹಲವು ನಾಯಕರು ಪಾಲ್ಗೊಂಡರು.

ಬಜೆಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ''ಇದು ಜನವಿರೋಧಿ ಬಜೆಟ್​. ಯಾರಿಗೂ ನ್ಯಾಯ ಸಿಕ್ಕಿಲ್ಲ. ವಿಶೇಷ ಪ್ಯಾಕೇಜ್ ಬಗ್ಗೆ ಮಾತನಾಡಿದ್ದಾರೆ, ಆದರೆ ವಿಶೇಷ ಸ್ಥಾನಮಾನ ನೀಡಿಲ್ಲ. ಇದೊಂದು ಮೋಸದ ಬಜೆಟ್. ಇದರಿಂದ ಜನತೆಗೆ ಅನ್ಯಾಯವಾಗಿದೆ'' ಎಂದು ದೂರಿದರು. ಇದೇ ವೇಳೆ, ಇತರ ಸಂಸದರು 'ನಮಗೆ ಭಾರತದ ಬಜೆಟ್ ಬೇಕು. ಎನ್‌ಡಿಎ ಬಜೆಟ್ ಅಲ್ಲ. ಬಜೆಟ್‌ನಲ್ಲಿ ಎನ್‌ಡಿಎಯು ಭಾರತಕ್ಕೆ ದ್ರೋಹ ಬಗೆದಿದೆ' ಎಂಬ ಭಿತ್ತಿಫಲಕಗಳ ಹಿಡಿದು ಘೋಷಣೆ ಕೂಗಿದರು.


ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ, ಸಂಸದ ಕೆ. ಸಿ. ವೇಣುಗೋಪಾಲ್, ''ನಿನ್ನೆಯ ಬಜೆಟ್ ಮೂಲಕ ಸರ್ಕಾರವು ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಎಲ್ಲ ತತ್ವಗಳನ್ನು ಉಲ್ಲಂಘಿಸಿದೆ. ಸರ್ಕಾರವನ್ನು ರಕ್ಷಿಸಿಕೊಳ್ಳುವುದೇ ಈ ಬಜೆಟ್‌ನ ಉದ್ದೇಶವಾಗಿದೆ. ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಹಣ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಕೇವಲ ಎರಡು ರಾಜ್ಯಗಳಿಗೆ ಇಷ್ಟು ಸೊಪ್ಪು ಹಾಕಿರುವುದು ಸರಿಯಲ್ಲ. ಇತರ ರಾಜ್ಯಗಳಿಗೂ ನ್ಯಾಯ ಸಿಗಬೇಕು. ಅದಕ್ಕಾಗಿಯೇ ನಾವು ಆಂದೋಲನ ನಡೆಸುತ್ತಿದ್ದೇವೆ. ಬಜೆಟ್​ ಬಗ್ಗೆ ಜನ ಕೂಡ ರೊಚ್ಚಿಗೆದ್ದಿದ್ದಾರೆ'' ಎಂದರು.


ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್, ''ಬಜೆಟ್​ನಲ್ಲಿ ಯುವಕರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡಲಾಗಿದೆ'' ಎಂದು ವಾಗ್ದಾಳಿ ನಡೆಸಿದರು. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ''ನಮ್ಮ ರಾಜ್ಯ ಉತ್ತರ ಪ್ರದೇಶಕ್ಕೆ ತಾರತಮ್ಯ ಮಾಡಲಾಗಿದೆ. ಅಲ್ಲದೇ, ಯುವಕರ ಉದ್ಯೋಗಗಳನ್ನು ಕಿತ್ತುಕೊಂಡು, ಈಗ ಅವರಿಗೆ ಶಿಷ್ಯವೇತನ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ'' ಎಂದು ಟೀಕಿಸಿದರು.


 







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್