LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ನಾಳೆ   ಎಸ್ಸಿ ಎಸ್ಟಿ ಒಬಿಸಿ ಮೀಸಲಾತಿ ಕುರಿತು ಸಂವಾದ : ಕೊಪ್ಪಳಕ್ಕೆ  ಉಗ್ರಪ್ಪ ಆಗಮನ*

ಕೊಪ್ಪಳ/ನಗರದಲ್ಲಿ ಇದೇ ದಿನಾಂಕ 24ರ ರವಿವಾರ ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಪ್ರವಾಸಿ ಮಂದಿರದಲ್ಲಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಮೀಸಲಾತಿ ಕುರಿತು ವಿಚಾರ ಸಂಕೀರ್ಣ ಮತ್ತು ಸಂವಾದ ಕಾರ್ಯಕ್ರಮ ಜರುಗಲಿದೆ ಮಾಜಿ ಸಂಸದ ಹಾಗೂ ಹಿರಿಯ ರಾಜಕೀಯ ನಾಯಕ ವಿ, ಎಸ್ ಉಗ್ರಪ್ಪ ಕೊಪ್ಪಳಕ್ಕೆ ಆಗಮಿಸಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಡಾ, ಕೆ ,ಎನ್, ಪಾಟೀಲ್ ತಿಳಿಸಿದರು, 
ಅವರು ಶುಕ್ರವಾರ  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನ ದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಈ ಕುರಿತು ಹೇಳಿಕೆ ನೀಡಿದ ಅವರು ಕರ್ನಾಟಕದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಜನರಿಗೆ ಮೀಸಲಾತಿಯಲ್ಲಿ ಸೂಕ್ತವಾದ ನ್ಯಾಯ ದೊರಕುವಂತೆ ಹಾಗೂ ಮೀಸಲಾತಿ ವಿಷಯ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವ ಕುರಿತು ಸರ್ಕಾರಕ್ಕೆ ಒತ್ತಾಯಿಸಲು ಈ ಸಂವಾದ ಕಾರ್ಯಕ್ರಮ ನಡೆಯಲಿದೆ ಇದರಲ್ಲಿ ಮೀಸಲಾತಿ ವಿಷಯ ಕುರಿತು ಮಾಜಿ ಸಂಸದ ವಿ ಎಸ್ ಉಗ್ರಪ್ಪ ನವರು ಸಂಪೂರ್ಣ ಮಾಹಿತಿ ನೀಡುವುದರ ಜೊತೆಗೆ ಸರಕಾರಕ್ಕೆ ಮನವರಿಕೆ ಮಾಡಿ ಒತ್ತಾಯಿಸಲು ಅವರು ಕೊಪ್ಪಳದ ವಿಚಾರ ಸಂಕೀರ್ಣ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದ್ದರು, 
ಮುಂದುವರಿದು ಮಾತನಾಡಿ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಹಾಗೂ ಮೀಸಲಾತಿಗೆ ಕಾನೂನಾತ್ಮಕ ಭದ್ರತೆ ಒದಗಿಸಲು ಅದನ್ನು  9ನೇ ಶೆಡ್ಯೂಲ್ ಗೆ ಸೇರಿಸುವುದು ಅತ್ಯಂತ ಅನಿವಾರ್ಯವಾಗಿದೆ ಈ ನಿಟ್ಟಿನಲ್ಲಿ ಮುಂದಿನ ಕಾನೂನು ಹೋರಾಟ ಮತ್ತು ಜಾಗೃತಿ ಮೂಡಿಸಲು ವಿಚಾರ ಸಂಕೀರ್ಣ ದಿನಾಂಕ 24ರ ರವಿವಾರ ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದು ಸಂಬಂಧಿಸಿದ ಸಮುದಾಯದ ಪ್ರತಿಯೊಬ್ಬರು ಇದರಲ್ಲಿ ಪಾಲ್ಗೊಂಡು ಈ ವಿಚಾರ ಸಂಕೀರ್ಣ ಹಾಗೂ ಸಂವಾದ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಾಲ್ಮೀಕಿ ಮಹಾಸಭಾದ ಅಧ್ಯಕ್ಷರಾದ ಡಾ, ಕೆ, ಎನ್ ಪಾಟೀಲ್ ಸಮುದಾಯದ ಜನರಿಗೆ ಕರೆ ನೀಡಿದರು, 
ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ನಾಯಕ ಟಿ, ರತ್ನಾಕರ್ ಕುಕನೂರ್, ವಾಲ್ಮೀಕಿ ಗುರುಪೀಠದ ಧರ್ಮದರ್ಶಿ, ರಾಮಣ್ಣ ಕಲ್ಲಾನವರ್ ,ರಾಜ್ಯ ಸಂಚಾಲಕ ಮಂಜುನಾಥ ಗೊಂಡಬಾಳ ,ನ್ಯಾಯವಾದಿ ಶಿವ ರೆಡ್ಡಿ ನಾಯಕ್ ಕಾರಟಗಿ ಹಾಗೂ ಕಾರಟಗಿಯ ಧರ್ಮದರ್ಶಿ,  ಗದ್ಯಪ್ಪ ನಾಯಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು,

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್