LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಬಣ್ಣನೆ



ವಿಜಯನಗರ (ಹೊಸಪೇಟೆ) ಏ.21:
ಜಗತ್ತಿಗೆ ಅದ್ವೈತ ಸಿದ್ಧಾಂತ  ಪರಿಚಯಿಸಿದ ಜಗದ್ಗುರು ಆದಿ ಶಂಕರಾಚಾರ್ಯರು  ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನ ಎಂದು  ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಬಣ್ಣಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಶಂಕರಾಚಾರ್ಯರು ಕೇವಲ 32 ವರ್ಷಗಳ ಅತ್ಯಲ್ಪ ಜೀವಿತಾವಧಿಯಲ್ಲಿ  ಇಡೀ ಭಾರತವನ್ನು ಪಾದಯಾತ್ರೆಯ ಮೂಲಕ ಸಂಚರಿಸಿ, ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪವಿತ್ರ ಮಠಗಳನ್ನು ಸ್ಥಾಪಿಸಿದರು. ಈ ಮೂಲಕ ಅವರು ರಾಷ್ಟ್ರೀಯ ಭಾವೈಕ್ಯತೆ ಮತ್ತು ಅಖಂಡತೆಗೆ  ಭದ್ರ ಬುನಾದಿ ಹಾಕಿದರು. ಶಂಕರಾಚಾರ್ಯರು ಪ್ರತಿಪಾದಿಸಿದ ಅಹಂ ಬ್ರಹ್ಮಾಸ್ಮಿ ತತ್ವವು ಮನುಷ್ಯರಲ್ಲಿರುವ ದೈವತ್ವವನ್ನು ಜಾಗೃತಗೊಳಿಸುತ್ತದೆ. ಸಮಾಜದಲ್ಲಿನ ಮೇಲು-ಕೀಳು ಎಂಬ ಭಾವ ತೊರೆದು ಸೌಹಾರ್ದಯುತವಾಗಿ ಬಾಳಬೇಕು ಎಂದರು.
 ಇಂದಿನ ಯುವ ಪೀಳಿಗೆಯು ಭೌತಿಕ ಸುಖಕ್ಕೆ ಮಾರುಹೋಗದೆ, ಶಂಕರಾಚಾರ್ಯರು ತೋರಿಸಿಕೊಟ್ಟ ಜ್ಞಾನ ಮತ್ತು ವಿವೇಕದ ಹಾದಿಯಲ್ಲಿ ಸಾಗಬೇಕು. ಸಂಸ್ಕಾರಯುತ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇಂತಹ ಮಹಾನ್ ಪುರುಷರ ಜಯಂತಿಗಳು ಕೇವಲ ಆಚರಣೆಗಷ್ಟೇ ಸೀಮಿತವಾಗದೆ, ಅವರ ತತ್ವಾದರ್ಶಗಳನ್ನು   ಮೈಗೂಡಿಸಿಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ, ಸಮಾಜದ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್