LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿಗೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೂಚನೆ

ವಿಜಯನಗರ(ಹೊಸಪೇಟೆ) ಮೇ. 06: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯವನ್ನು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಅತ್ಯಂತ ವೈಜ್ಞಾನಿಕವಾಗಿ ಮತ್ತು ಸಮರ್ಪಕವಾಗಿ ವಿಲೇವಾರಿ ಮಾಡಲು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ವಿಸಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಯೋಜನೆಯು ಕೇವಲ ಕಸದ ವಿಲೇವಾರಿಯನ್ನಷ್ಟೇ ಗುರಿಯಾಗಿಟ್ಟುಕೊಳ್ಳದೆ, ಪರಿಸರ ಸಮತೋಲನ ಕಾಪಾಡಿಕೊಳ್ಳುವುದು ಯೋಜನೆಯ ಉದ್ದೇಶವಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಸ ಎಲ್ಲೆಂದರಲ್ಲಿ ಎಸೆಯದೇ,  ಕಸವನ್ನು  ಸುಡುವುದಾಗಲಿ ಅಥವಾ ಭೂಮಿಯಲ್ಲಿ ಹೂಳುವುದಾಗಲಿ ಮಾಡದೆ, ವೈಜ್ಞಾನಿಕ ವಿಲೇವಾri ಮಾಡುವ ಮೂಲಕ ತ್ಯಾಜ್ಯ ಮುಕ್ತ ಪರಿಸರ ನಿರ್ಮಿಸಬೇಕು. ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆಗೆ ನೀಡಬೇಕು. ಹಸಿ ಕಸದಿಂದ ಕಾಂಪೋಸ್ಟ್ ನಂತಹ ಗೊಬ್ಬರ ತಯಾರಿಸಿ ಮಣ್ಣಿನ ಫಲವತ್ತತೆ ಹೆಚ್ಚಿಸುವುದು ಮತ್ತು ಪ್ಲಾಸ್ಟಿಕ್‌ನಂತಹ ವಸ್ತುಗಳನ್ನು ಮರುಬಳಕೆಗೆ ಒಳಪಡಿಸುವುದು ಸೂಕ್ತ ಎಂದರು. ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಹೊಸ ನಿಯಮ ಅನ್ವಯ ದಿನಕ್ಕೆ 100 ಕೆ.ಜಿಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಸಂಸ್ಥೆಗಳು ಅಥವಾ 20,000 ಚದರ ಮೀಟರ್‌ಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ಅಪಾರ್ಟ್‌ಮೆಂಟ್ ಮತ್ತು ವಾಣಿಜ್ಯ ಮಳಿಗೆಗಳು ತಮ್ಮ ಆವರಣದಲ್ಲೇ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಹೊಂದುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಅಂತಹ ಸಂಸ್ಥೆಗಳು ಬೃಹತ್ ತ್ಯಾಜ್ಯ ಉತ್ಪಾದಕ ಜವಾಬ್ದಾರಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿದೆ. ಈ ನಿಯಮ ಉಲ್ಲಂಘಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಸ್ಥಳದಲ್ಲೇ ದಂಡ ವಿಧಿಸುವ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದರು.
ತ್ಯಾಜ್ಯ ನಿರ್ವಹಣೆಯು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಇದು ಸಾರ್ವಜನಿಕರ  ಸಹಕಾರವು ಅತ್ಯಗತ್ಯ. ಈ ನಿಟ್ಟಿನಲ್ಲಿ ಮೂಲದಲ್ಲಿಯೇ ಹಸಿ ಕಸ ಮತ್ತು ಒಣ ಕಸವನ್ನು ಮನೆಯಲ್ಲೇ ಪ್ರತ್ಯೇಕಿಸಿ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು. ಇದರಿಂದ ಕಾರ್ಮಿಕರ ಶ್ರಮ ಮತ್ತು ಸಮಯ ಎರಡೂ ಉಳಿತಾಯವಾಗಲಿದೆ. ಈ ಕುರಿತು ಅಭಿಯಾನಗಳ ಮೂಲಕ ಸಾರ್ವಜನಿಕರಲ್ಲಿ ತ್ಯಾಜ್ಯ  ಎಲ್ಲೆಂದರಲ್ಲಿ ಎಸೆಯದಂತೆ ಜಾಗೃತಿ ಮೂಡಿಸಿಬೇಕು.
ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಕಾರ್ಮಿಕರಿಗೆ  ತರಬೇತಿ ಮತ್ತು ಸ್ವ-ಸುರಕ್ಷತಾ ಸಾಧನ ಸಲಕರಣೆ  ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರತಿ ವರ್ಷ ಜೂನ್ 30ರೊಳಗೆ ತ್ಯಾಜ್ಯ ಸಂಸ್ಕರಣೆಯ ಸಂಪೂರ್ಣ ಮಾಹಿತಿಯನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ  ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಶಿವಕುಮಾರ್, ಉಪವಿಭಾಗಾಧಿಕಾರಿ ವಿವೇಕ್, ತಹಶೀಲ್ದಾರ್ ಶೃತಿ.ಎಂ, ಸೇರಿದಂತೆ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್