ಧಾರವಾಡ,25 : ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ದತ್ತಾಂಶವು ಅತ್ಯಂತ ಮಹತ್ವದ್ದಾಗಿದ್ದು, ಎಲ್ಲ ಇಲಾಖೆಗಳು ನಿಖರ ಹಾಗೂ ಸರಿಯಾದ ಮಾಹಿತಿಯನ್ನು ಒದಗಿಸಬೇಕು. ತಪ್ಪು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್. ಆರ್ ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಯೋಜನೆ- 2021 ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಕಾರ್ಯಕ್ರಮ ಜರುಗಿಸಿ, ಮಾತನಾಡಿದರು.
ಧಾರವಾಡ ಜಿಲ್ಲೆಯಲ್ಲಿ ಹತ್ತು ಮಕ್ಕಳಿಗೆ ಒಬ್ಬ ಶಿಕ್ಷಕರಿರುವ ಕುರಿತು ಸಂಪೂರ್ಣ ಮಾಹಿತಿ ಸಲ್ಲಿಸಬೇಕು. ಆರೋಗ್ಯ ಇಲಾಖೆಯಲ್ಲಿ ತಾಯಂದಿರು ಹಾಗೂ ಮಕ್ಕಳ ಸಾವಿನ ಪ್ರಕರಣಗಳ ಸಂಖ್ಯೆ ಮತ್ತು ಸಂಬಂಧಿತ ಮಾಹಿತಿಯನ್ನು ಮರುಪರಿಶೀಲಿಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಮಾನವ ಅಭಿವೃದ್ಧಿ ಸೂಚ್ಯಂಕ ಹಾಗೂ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ ಸೂಚ್ಯಂಕ ಸರ್ಕಾರದ ಪ್ರಮುಖ ಮಾನದಂಡವಾಗಿದ್ದು, ಹಿಂದುಳಿದ ತಾಲೂಕಿನ ದತ್ತಾಂಶ ಸಂಗ್ರಹ ನಿಖರವಾಗಿರಬೇಕು.
ಜಿಲ್ಲೆಯ ಪ್ರತಿಯೊಂದು ತಾಲೂಕಿನ ಪರಿಸ್ಥಿತಿ ವಿಭಿನ್ನವಾಗಿದ್ದು, ಶಿಕ್ಷಣ, ಆರೋಗ್ಯ, ಪೌಷ್ಟಿಕತೆ, ಹಾಗೂ ಮುಲಭೂತ ಸೌಕರ್ಯ ಕೊರತೆ ಇರಬಹುದು. ಅಂತಹ ದತ್ತಾಂಶವನ್ನು ಪರಿಶೀಲಿಸಿ, ನಿಖರವಾದ ಮಾಹಿತಿ ನೀಡಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಆರೋಗ್ಯ ಇಲಾಖೆಯವರು ಪೌಷ್ಟಿಕ ಆಹಾರ ಮತ್ತು ಆರೋಗ್ಯ ಸೇವೆ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಮನ್ವಯತೆಯಿಂದ ದತ್ತಾಂಶ ಕ್ರೋಢೀಕರಿಸಿ ಸಲ್ಲಿಸಬೇಕು. ಉನ್ನತ ಮಾಧ್ಯಮಿಕ ಶಿಕ್ಷಣಕ್ಕಾಗಿ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದ ಸಂಪೂರ್ಣ ವಿವರವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪೆÇಲೀಸ್ ವರಿμÁ್ಠಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ., ಪ್ರೋಬ್ರಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಡಿಸಿಪಿ ಶೃತಿ, ಜಿಲ್ಲಾ ನೋಡಲ್ ಅಧಿಕಾರಿ ಆರ್.ವಿ ದಾಡಿಬಾಯಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ದೀಪಕ ಮಡಿವಾಳ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.