LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು ಅಭಿಮತ




ಬಳ್ಳಾರಿ,ಜು.29 ಕೃತಕ ಬುದ್ಧಿಮತ್ತೆ ಅಥವಾ ಇನ್ಯಾವುದೇ ತಂತ್ರಜ್ಞಾನಗಳು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ನೈತಿಕತೆ ಮತ್ತು ಸಹಾನುಭೂತಿಯ ಶಿಕ್ಷಣ ಒದಗಿಸುದಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು ಹೇಳಿದರು.

 ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ೧೭ನೇ ಸಂಸ್ಥಾಪನಾ ದಿನಾಚರಣೆಯನ್ನು ಗಣ್ಯರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
 ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವುದರ ಜೊತೆಗೆ ಮಾನವಿಯ ಮೌಲ್ಯಗಳ ಪರಂಪರೆಯ ಕುರಿತಾದ ಜ್ಞಾನ ಒದಗಿಸಬೇಕು. ವಿದ್ಯಾರ್ಥಿಗಳ ಸಾಮಾಜಿಕ ಪರಂಪರೆಯನ್ನು ಉಳಿಸಿ, ಬೆಳೆಸಬೇಕಾಗಿದೆ. ವಿದ್ಯಾರ್ಥಿಗಳು ಸದಾಕಾಲ ಕಲಿಕಾ ಆಸಕ್ತಿಯನ್ನು ಹೊಂದಿರಬೇಕು ಎಂದು ತಿಳಿಸಿದರು. ಯುವಕರಲ್ಲಿ ಮಾನವೀಯ ಮೌಲ್ಯಗಳ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಶ್ವವಿದ್ಯಾಲಯಗಳು ಮೌಲ್ಯಯುತ ಶಿಕ್ಷಣ ಒದಗಿಸಲು ಶ್ರಮಿಸಬೇಕು ಎಂದು ಹೇಳಿದರು.
 ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗುಲಬರ್ಗಾ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ ಎಂ ಮುನಿಯಮ್ಮ ಮಾತನಾಡಿ, ಸಂಶೋಧನಾ ವಿದ್ಯಾರ್ಥಿಗಳು ಯಾವುದೇ ಫೆಲೊಶೀಪ್‌ಗಾಗಿ ಕಾಯದೆ ಸಂಶೋಧನಾ ಲೇಖನಗಳನ್ನು ಅಂತರಾಷ್ಟಿçÃಯ ಮಟ್ಟದ ಜರ್ನಲ್‌ಗಳಲ್ಲಿ ಪ್ರಕಟಿಸಲು ಒತ್ತು ನೀಡಿ. ಯಶಸ್ಸಿಗೆ ಸುಲಭ ಮಾರ್ಗ ಹುಡುಕದೆ ಶ್ರಮವಹಿಸಿ ಉತ್ತಮ ಸಂಶೋಧನೆಯಲ್ಲಿ ತೊಡಗಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಬೋಧಕರು ಸಹ ಪಾಠ ಮಾಡುವ ಮೊದಲು ಉತ್ತಮವಾಗಿ ತಯಾರಿ ನಡೆಸಬೇಕು ಎಂದು ಹೇಳಿದರು.
 ಬೆಂಗಳೂರು ವಿವಿಯ ಮಾಜಿ ಕುಲಸಚಿವರಾದ ಪ್ರೊ ಕೆ ಸೀತಮ್ಮ ಅತಿಥಿಗಳಾಗಿ ಮಾತನಾಡಿ, ಸಮಾಜದಲ್ಲಿ ಸಮಾನತೆ ಶಿಕ್ಷಣ ಕ್ಷೇತ್ರವು ದೇಶದ ಆರ್ಥಿಕ ಪ್ರಗತಿಗಿಂತ ಶೇ ೧೩.೮ ಏರಿಕೆ ಕಂಡಿದೆ. ಉನ್ನತ ಶಿಕ್ಷಣದಲ್ಲಿ ಮಹಿಳಾ ಶಿಕ್ಷಣವು ಶೇ ೨೭.೯ ಪ್ರಗತಿ ಕಂಡಿದೆ. ಇಷ್ಟಾದರೂ ವಿಶ್ವದ ಒಟ್ಟು ಶಿಕ್ಷಿತರ ೩೦ ಪ್ರತಿಶತ ಭಾಗದಷ್ಟು ನಮ್ಮ ದೇಶ ತಲುಪಿಲ್ಲ. ೧೨೮೯ ವಿಶ್ವವಿದ್ಯಾಲಯಗಳು ೪೮ ಸಾವಿರಕ್ಕೂ ಹೆಚ್ಚು ಕಾಲೇಜುಗಳಲ್ಲಿ ೪ ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ೧೭.೩ ಲಕ್ಷ ಶಿಕ್ಷಕರಿದ್ದರೂ ಸಹ ನಿಗದಿತ ಶೈಕ್ಷಣಿಕ ಸಾಧನೆ ಆಗಿಲ್ಲ. ಕೇವಲ ಶಿಕ್ಷಣದಿಂದ ಮಾತ್ರವೇ ಸಾಮಾಜಿಕ ಹಾಗೂ ಸಾರ್ವಜನಿಕ ಸಮಾನತೆ ಮತ್ತು ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಸುಲಭ ಮಾರ್ಗವಿಲ್ಲ. ಕಷ್ಟಪಟ್ಟು ಓದಿದಾಗ ಒಳ್ಳೆಯ ಗೌರವ ಸಿಗುತ್ತದೆ. ಸರ್ಕಾರದಿಂದ ಬರಲಿರುವ ಅನುದಾನವನ್ನು ವಿವಿಯ ಅಭಿವೃದ್ದಿಗಾಗಿ ಬಳಸಲಾಗುವುದು ಎಂದು ಹೇಳಿದರು.

 ೧೭ನೇ ಸಂಸ್ಥಾಪನೆ ದಿನಾಚರಣೆಯ ಅಂಗವಾಗಿ ವಿವಿಯ ಆವರಣದಲ್ಲಿ ೧೦೦ ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ನೆಡುತೋಪು ಕಾರ್ಯಕ್ರಮ ನೆಡಲಾಯಿತು. ಎಂಸಿಎ ಎಂಕಾA ಎಂಬಿಎ ವಿದ್ಯಾರ್ಥಿಗಳಿಗಾಗಿ ಕಂಪ್ಯೂಟರ್ ಪ್ರಯೋಗಾಲಯಗಳನ್ನು ಉದ್ಘಾಟಿಸಲಾಯಿತು. ವಿವಿಯ ನವಿಕೃತ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಚೆಕ್ಕ್ಗಳನ್ನು ನೀಡಲಾಯಿತು. ಅಂಧ ವಿದ್ಯಾರ್ಥಿಗೆ ಲ್ಯಾಪ್ಟಾಪ್ ನೀಡಲಾಯಿತು. ಹಾಗೂ ವಿಶ್ವದ ೫% ವಿಜ್ಞಾನಿಗಳ ಸಾಲಿನಲ್ಲಿ ಸ್ಥಾನ ಪಡೆದಿರುವ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರುಗಳಿಗೆ ಸನ್ಮಾನಿಸಲಾಯಿತು ಮಾಡಲಾಯಿತು.

ವಿಶ್ವವಿದ್ಯಾಲಯದ ವಿತ್ತಾಧಿಕಾರಿಗಳಾದ ಸ್ಫೂರ್ತಿ ಕೆ ಜಿ, ಸಂಸ್ಥಾಪನಾ ದಿನಾಚರಣೆಯ ಸಂಯೋಜಕರಾದ ಪ್ರೊ ಕೆ ಎಸ್ ಲೋಕೇಶ್ ವೇದಿಕೆಯಲ್ಲಿದ್ದರು.
 ಈ ಸಂದರ್ಭದಲ್ಲಿ ವಿವಿಯ ಎಲ್ಲ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು ಉಪಸ್ಥಿತರಿದ್ದರು.
 ಕಾರ್ಯಕ್ರಮವನ್ನು ಡಾ ಸುಷ್ಮಾ ಎನ್ ಜೋಗನ್ ನಿರೂಪಿಸಿದರು. ವಿವಿಯ ಕುಲಸಚಿವರಾದ ಪ್ರೊ ವಿ ಲೋಕೇಶ್ ಅತಿಥಿಗಳನ್ನು ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವರಾದ ಪ್ರೊ ಎನ್ ಎಂ ಸಾಲಿ ವಂದಿಸಿದರು. ನಂತರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
 ವಿಶ್ವವಿದ್ಯಾಲಯದ ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ವರ್ಗ, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್