LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು

ನವದೆಹಲಿ, 

ಕರ್ನಾಟಕ ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ‘ಕೇವಲ ಗಾಳಿ ಸೇವನೆಗೆ ಇಲ್ಲಿಗೆ ಬಂದಿಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿರುವ ಮಾತು, ಅವರ ಭೇಟಿಯ ಹಿಂದಿನ ರಾಜಕೀಯ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ.

ಮೇ ಮೊದಲ ವಾರದಲ್ಲಿ ಕೆಲವು ಪ್ರಮುಖ ನಿರ್ಧಾರಗಳು ಹೊರಬರಬಹುದು. ರಾಜ್ಯ ನಾಯಕರನ್ನು ಹೈಕಮಾಂಡ್ ದೆಹಲಿಗೆ ಕರೆದು ಮಾತುಕತೆ ನಡೆಸಬಹುದು ಎಂದು ಡಿಕೆ ಸಹೋದರರು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆ ಭೇಟಿಯ ಪೂರ್ವಭಾವಿಯಾಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ. ಒಂದು ಕಡೆ ಸರ್ಕಾರಿ ಕೆಲಸಗಳ ನೆಪದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದರೂ, ಅವರ ಮುಖ್ಯ ಉದ್ದೇಶ ಪಕ್ಷದ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿ ತಮ್ಮ ಹಕ್ಕೊತ್ತಾಯವನ್ನು ಗಟ್ಟಿಗೊಳಿಸುವುದಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಪುಟ ವಿಸ್ತರಣೆ ಅಥವಾ ಪುನರಚನೆಗಿಂತ ಮೊದಲು ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ಆಗಬೇಕು ಎಂಬ ಪ್ರಸ್ತಾಪವನ್ನು ಡಿಕೆ ಬಣ ಮುಂದಿಡುತ್ತಿದೆ. ಇತ್ತ ಸಿಎಂ ಬಣ ಕೂಡ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ ಹೈಕಮಾಂಡ್ ಕರೆದರೆ ಮುಂದಿನ ತಂತ್ರಗಾರಿಕೆ ಏನು ಎಂಬುದರ ಬಗ್ಗೆ ಸಿದ್ಧತೆ ನಡೆಸುತ್ತಿದೆ. ಮೇ ಮೊದಲ ವಾರದ ಬಳಿಕ ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗುವ ಎಲ್ಲ ಸಾಧ್ಯತೆಗಳಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್