LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೇಕೆದಾಟು ಸಮಸ್ಯೆ ಬಗೆಹರಿಸಲು ಮೋದಿ ಸಲಹೆ ನೀಡಿದ್ದಾರೆ ಡಿಕೆ ಶಿವಕುಮಾರ್

ನವದೆಹಲಿ, ಆಗಸ್ಟ್ 1: ಮೇಕೆದಾಟು ಸಮಸ್ಯೆ ಬಗೆಹರಿಸಲು ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳು ಒಟ್ಟಾಗಿ ಕುಳಿತುಕೊಂಡು ಮಾತುಕತೆ ನಡೆಸಬೇಕು. ಆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಿವಕುಮಾರ್ ದೆಹಲಿಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ವಿವಿಧ ಯೋಜನೆಗಳಿಗೆ ಕೇಂದ್ರದ ಅನುದಾನ ಕೋರಿ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ.

ಸಭೆಯಿಂದ ಹೊರಬಂದ ಬಳಿಕ ಮಾತನಾಡಿದ ಶಿವಕುಮಾರ್, ನಾನು ಮೇಕೆದಾಟು ವಿಷಯವನ್ನು ಪ್ರಸ್ತಾಪಿಸಿದಾಗ, ಅದನ್ನು ನಮ್ಮಲ್ಲಿಯೇ ಬಗೆಹರಿಸಿಕೊಳ್ಳುವಂತೆ ಪ್ರಧಾನಿ ಸೂಚಿಸಿದರು ಎಂದಿದ್ದಾರೆ.

ನಿಗದಿತ ಅವಧಿಗಿಂತ ಜುಲೈನಲ್ಲಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟಿರುವ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಲಾಗಿದೆ. ಮೇಕೆದಾಟುವಿನಲ್ಲಿ ಜಲಾಶಯವನ್ನು ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ನೀಡುವಂತೆ ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದೆ. ಮೇಕೆದಾಟು ಜಲಾಶಯ ನಿರ್ಮಿಸಿದ್ದರೆ ಹೆಚ್ಚುವರಿ ನೀರು ಸಂಗ್ರಹವಾಗುತ್ತಿತ್ತು ಎಂಬುದನ್ನೂ ತಿಳಿಸಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ