LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

 ವೈದ್ಯರ ಮತ್ತು ಪತ್ರಿಕಾ ದಿನಾಚರಣೆ


ಯರಗಟ್ಟಿ,ಜು,೦೩: ಪತ್ರಕರ್ತರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ ಎಮ್.ವಿ.ಗುಂಡಪ್ಪಗೋಳ ಹೇಳಿದರು.
 ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಕಂದಾಯ, ವೈದ್ಯರ ಮತ್ತು ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ಕಣ್ಣು ಮತ್ತು ಕಿವಿಯಾಗಿದ್ದು, ಸತ್ಯವನ್ನು ನಿರ್ಭೀತಿಯಿಂದ ಜನರ ಮುಂದಿಡುವ ಗುರುತರ ಜವಾಬ್ದಾರಿ ಪತ್ರಕರ್ತರ ಮೇಲಿದೆ. ಸುದ್ದಿಗಳ ಪ್ರಸಾರದಲ್ಲಿ ಸತ್ಯ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆ ಆದ್ಯತೆ ಇರಬೇಕು ಎಂದು ಹೇಳಿದರು.
 ಚುನಾವಣೆ ಇಲಾಖೆ ಶೀರಸ್ತುದಾರ ಎಸ್.ಬಿ.ಕುಲಕರ್ಣಿ ಮಾತನಾಡಿ, ಪತ್ರಕರ್ತರು ರಾಜಕೀಯ, ಆರ್ಥಿಕ ಅಥವಾ ವೈಯಕ್ತಿಕ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ವರದಿ ಮಾಡಿದಾಗ ಮಾತ್ರ ಸಮಾಜದಲ್ಲಿ ಮಾಧ್ಯಮಗಳ ಮೇಲಿನ ವಿಶ್ವಾಸ ಉಳಿಯುತ್ತದೆ ಎಂದರು. ತಹಶೀಲ್ದಾರ ಎಮ್.ವಿ.ಗುಂಡಪ್ಪಗೋಳ, ವೈದ್ಯರು ಡಾ.ಸಚೀನ ಉಪ್ಪಿನ, ಡಾ.ವಿಜಯ ಬೆನಕಟ್ಟಿ ಹಾಗೂ ಪತ್ರಕರ್ತರು ಶಿವಾನಂದ ಬಳಿಗಾರ, ಕೆ.ಎಫ್.ನದಾಪ, ಈರಣ್ಣ ಹೂಲ್ಲೂರ, ರವಿಕುಮಾರ ಅಣ್ಣಿಗೇರಿ, ಫಿರೋಜ ಖಾದ್ರಿ, ಶಶಿಧರ ಪಾಟೀಲ, ಬಸವರಾಜ ದಳವಾಯಿ, ಮಹಾಂತೇಶ ಗಿಲಾಕಿ, ಜಗದೀಶ ಕೌಜಲಗಿ, ಮಲ್ಲೇಶ ದಳವಾಯಿ, ಪ್ರದೀಪ ಮಠಪತಿ ಅವರನ್ನು ಸನ್ಮಾನಿಸಿದರು.
 ಗ್ರಾಮ ಆಡಳಿತಾಧಿಕಾರಿ ಎಲ್.ಬಿ.ದಳವಾಯಿ, ಯಲ್ಲಪ್ಪ ಬಾಂಗಿ, ಕೆ.ಎಂ.ಗಡಕರಿ, ಸ್ವರೂಪ ಹಪ್ಪಳಿ, ಲಖನ್ ಪೂಜೇರಿ, ವಿಜಯ ಉಪ್ಪಿನ, ರಾಜು ಜೀವಾಪೂರ, ಮಂಜು ಬಡಿಗೇರ, ರವಿ ತಳವಾರ, ಎಲ್.ಸಿ.ತಳವಾರ ಹಾಗೂ ಸಿಬ್ಬಂದಿ, ಪತ್ರಕರ್ತರು ಇದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್