LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ: ಭೂಮರಡ್ಡಿ



ಕೊಪ್ಪಳ: ಜಾಗತಿಕ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ತಪ್ಪಾಗಿ ಅರ್ಥೈಸುತ್ತಿರುವುದು ದೇಶದ ಪ್ರಗತಿಗೆ ಪೂರಕವಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ ಹೇಳಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಜಗತ್ತಿನ ಪ್ರತಿಯೊಂದು ರಾಷ್ಟ್ರಕ್ಕೂ ಸಂಕಷ್ಟವನ್ನು ತಂದಿಟ್ಟಿದೆ. ಹಾಗೆ ನೋಡಿದರೆ ಬಹುತೇಕ ರಾಷ್ಟ್ರಗಳಲ್ಲಿ ಭೀಕರ ಪರಿಸ್ಥಿತಿ ಇದೆ. ಅಂತಹ ಪರಿಸ್ಥಿತಿ ನಮ್ಮ ದೇಶದಲ್ಲಿ ಇಲ್ಲ. ಈ ಸಂಘರ್ಷ ಕೊನೆಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಆದ್ದರಿಂದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸುವ ಸಲುವಾಗಿ  ಮಿತವ್ಯಯದ ಕ್ರಮಗಳ ಅಗತ್ಯತೆಯನ್ನು ಪ್ರಧಾನಿಯವರು ಪ್ರತಿಪಾದಿಸಿದ್ದಾರೆ. ಈ ವಾಸ್ತವವನ್ನು ನಾವು ಸರಿಯಾಗಿ ಗ್ರಹಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

"ಸದೃಢ ಆರ್ಥಿಕತೆಗೆ ವಿದೇಶಿ ವಿನಿಮಯ ಹೆಚ್ಚಿನ ಪ್ರಮಾಣದಲ್ಲಿ ಮೀಸಲಿನಲ್ಲಿರಬೇಕು. ಆಮದು ಪ್ರಮಾಣ ಕಡಿಮೆಗೊಂಡರೆ ಹಾಗೂ ದೇಶದ ಸಂಪತ್ತು ದೇಶದಲ್ಲಿಯೇ ವ್ಯಯಗೊಂಡರೆ ಇದು ಸಾಧ್ಯ. ಇಲ್ಲದಿದ್ದರೆ ರೂಪಾಯಿ ಮೌಲ್ಯ ಕುಸಿತಗೊಂಡು ಆರ್ಥಿಕತೆಗೆ ಧಕ್ಕೆ ಉಂಟಾಗುತ್ತದೆ. ಮೋದಿಯವರು  ವೆಚ್ಚ ಕಡಿಮೆ ಮಾಡಿ ಉಳಿತಾಯಕ್ಕೆ ಮಹತ್ವ ಕೊಡಿ ಎಂದು ಹೇಳಿದ್ದಾರೆಯೆ ಹೊರತು ತ್ಯಾಗ ಮಾಡಿ ಎಂದು ಹೇಳಿಲ್ಲ. ಅವರ ಈ ಸಲಹೆ ಯುದ್ಧ ಕೊನೆಗೊಂಡು ಸಹಜ ಸ್ಥಿತಿ ಮರಳುವ ತನಕ ಮಾತ್ರ ಎಂಬುದನ್ನು ಗಮನಿಸಬೇಕಿದೆ,"  ಎಂದು ಭೂಮರೆಡ್ಡಿ ವಿವರಿಸಿದ್ದಾರೆ.

ಡಾಲರ್ ಎದುರು ರೂಪಾಯಿ ಮೌಲ್ಯ ಕಡಿಮೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ. ಪ್ರಧಾನಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಐಷಾರಾಮಿ ಬದುಕಿಗೆ ಪ್ರಚೋದಿಸುವ ವಿರೋಧ ಪಕ್ಷಗಳ ಹೇಳಿಕೆ ದೇಶದ ಆರ್ಥಿಕ ಭದ್ರತೆಗೆ ಬಹುದೊಡ್ಡ ಅಪಾಯ. ರಾಜಕೀಯ ವಿಷಯಗಳನ್ನು ಆಚೆಗಿಟ್ಟು ದೇಶದ ಹಿತ ದೃಷ್ಟಿಯಿಂದ ವಿಚಾರಿಸುವ ಸಮಯವಿದು ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್