LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಮನೆ ಬಾಗಿಲಿಗೆ ಸರ್ಕಾರದ ಯೋಜನೆ; ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ಸತೀಶ್ ಜಾರಕಿಹೊಳಿ


ಯರಗಟ್ಟಿ : ರಾಜ್ಯ ಸರ್ಕಾರವು ಪ್ರತಿಯೊಬ್ಬ ಪ್ರಜೆಯನ್ನು ತಲುಪಬೇಕು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಸಂದೇಶವನ್ನು ಪ್ರತಿ ಮನೆ ಮನೆಗೆ ನೀಡಬೇಕು ಎನ್ನುವ ಆಶಯದೊಂದಿಗೆ ಪ್ರಜಾಸೇವಾ ಆಂದೋಲನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೋಕೋಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.
ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ಯರಗಟ್ಟಿ ಹಾಗೂ ಸವದತ್ತಿ ತಾಲೂಕಿನ ಪ್ರಜಾ ಸೇವೆ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದು ೧೦೦ ದಿನಗಳು ಪೂರ್ಣಗೊಂಡಿದ್ದು, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸುವ ಉದ್ದೇಶದಿಂದ ’ಪ್ರಜಾ ಸೇವೆ’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ರೀತಿಯ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು.
 ಕಳೆದ ಮೂರು ವ?ಗಳಿಂದ ಸಾರ್ವಜನಿಕರೊಂದಿಗೆ ನಿರಂತರವಾಗಿ ಸಭೆ ನಡೆಸಿ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದ್ದರೂ ಅರ್ಜಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಅರ್ಜಿಗಳನ್ನು ಹಿಡಿದು ಕಚೇರಿಗಳ ಸುತ್ತಾಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರತ್ಯೇಕ ವ್ಯವಸ್ಥೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
 ಸರ್ಕಾರದ ಪ್ರತಿಯೊಂದು ಯೋಜನೆಯ ಅನುಕೂಲತೆಯನ್ನು ಗ್ರಾಮದ ಪ್ರತಿಯೊಂದು ಮನೆಗೆ ತಲುಪಿಸುವುದು, ಸಾರ್ವಜನಿಕರ ಅಹವಾಲು ಆಲಿಸಲೆಂದೇ ಪ್ರತ್ಯೇಕವಾಗಿ ಪ್ರಜಾ ಸೇವೆ ಇಲಾಖೆಯೊಂದನ್ನು ರಚನೆ ಮಾಡಿ ಸಾರ್ವಜನಿಕರ ಅಹವಾಲುಗಳನ್ನು ಗುಣಾತ್ಮಕ ರೀತಿಯಲ್ಲಿ ವಿಲೇವಾರಿ ಮಾಡುವುದು ಈ ಪ್ರಜಾಸೇವೆ ಆಂದೋಲನದ ವಿಶೇ?ತೆಯಾಗಿದೆ ಎಂದು ತಿಳಿಸಿದರು.
ಜನರ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲೂ ’ಪ್ರಜಾ ಸೇವೆ’ ಆಂದೋಲನ ಕಾರ್ಯಕ್ರಮ ನಡೆಸಲಾಗುವುದು. ಅಧಿಕಾರಿಗಳು ಅರ್ಜಿಗಳನ್ನು ಕೇವಲ ಸ್ವೀಕರಿಸುವುದಕ್ಕೆ ಸೀಮಿತವಾಗದೆ, ಕಾನೂನು ಬದ್ಧವಾಗಿ ಸಾಧ್ಯವಿರುವ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
 ಶಾಸಕರಾದ ವಿಶ್ವಾಸ್ ವೈದ್ಯ ಮಾತನಾಡಿ, ಸಾರ್ವಜನಿಕರ ಮನೆ ಬಾಗಿಲಗೆ ಸರಕಾರದ ಆಡಳಿತವನ್ನು ತೆಗೆದುಕೊಂಡು ಹೋಗುವ ಉದ್ದೇಶದೊಂದಿಗೆ ಪ್ರಜಾ ಸೇವಾ ಅಂದೋಲನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸರಕಾರದ ಮಹತ್ವಾಕಾಂಕ್ಷೆಯ ಈ ಕಾರ್ಯಕ್ರಮದಿಂದಾಗಿ ಸಾರ್ವಜನಿಕರ ತಮ್ಮ ಬಹು ದಿನಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನು?ನಗೊಳಿಸುವುದರ ಮೂಲಕ ಸರಕಾರವು ನುಡಿದಂತೆ ನಡೆಯುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರ ಉಸ್ತುವಾರಿಯಲ್ಲಿ ಈ ಭಾಗದ ಅನೇಕ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಸರಕಾರಿ ಕಾರ್ಯದರ್ಶಿ ಸಹಕಾರಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಬಿ. ಶೆಟ್ಟಣ್ಣವರ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯತ ಸಿಇಓ ರಾಹುಲ್ ಶಿಂಧೆ, ಯರಗಟ್ಟಿ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ, ಸವದತ್ತಿ ತಹಶೀಲ್ದಾರ ಎಂ ಎನ್. ಹೆಗ್ಗನ್ನವರ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ಪಟ್ಟಣ ಪಂಚಾಯತ ಮುಖ್ಯ ಅಧಿಕಾರಿ ಮಹೇಶ ಭಜಂತ್ರಿ, ಸಿಪಿಐ ಅಯ್. ಎಂ. ಮಠಪತಿ ಜಿ. ಪಂ. ಎಇಇ ಬಸವರಾಜ ಅಯ್ಯನಗೌಡರ, ಕೃಷಿ ಅಧಿಕಾರಿ ಶಿವಪ್ರಕಾಶ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆರ್. ಆರ್, ಕುಲಕರ್ಣಿ ಸೇರಿದಂತೆ ಜಿಲ್ಲಾಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST