LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಬಡವರು, ದೀನದಲಿತರ ಕಣ್ಣೀರು ಒರೆಸಿದ ಶ್ರೇಷ್ಠ ವ್ಯಕ್ತಿ ಡಾ.ಬಾಬು ಜಗಜೀವನರಾಂ"

ಯರಗಟ್ಟಿ: ‘ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ’ ಎಂದು ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಹೇಳಿದರು.

ತಾಲೂಕಾ ಆಡಳಿತ ಪಟ್ಟಣ ಪಂಚಾಯತ, ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ರವಿವಾರ ಜನತಾ ಕಾಲೋನಿಯ ಬಾಬು ಜಗಜೀವನರಾಮ ಭವನದಲ್ಲಿ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರ ೧೧೯ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು’ ಎಂದು ತಿಳಿಸಿದರು.

‘ಇಂತಹ ಮಹಾನ್ ನಾಯಕರ ಕೊಡುಗೆ, ತತ್ವಾದರ್ಶಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಬಸವೇಶ್ವರ ಪ್ರೌಢ ಶಾಲೆಯ ಶಿಕ್ಷಕ ಡಾ. ಕುಮಾರ ದಾಸರ ಮಾತನಾಡಿ, ‘ಬಾಬು ಜಗಜೀವನರಾಂ ಅವರು ದೇಶ ಕಂಡ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ದಕ್ಷ ಆಡಳಿತಗಾರರಾಗಿದ್ದರು. ಹಸಿರು ಕ್ರಾಂತಿಯ ಹರಿಕಾರರಾಗಿ ಜನಸಾಮಾನ್ಯರು ಎಂದಿಗೂ ಮರೆಯದ ವ್ಯಕ್ತಿತ್ವವನ್ನು ಹೊಂದಿದ್ದರು. ಬಡವರು, ದೀನದಲಿತರ ಕಣ್ಣೀರು ಒರೆಸಿದ ಶ್ರೇಷ್ಠ ವ್ಯಕ್ತಿತ್ವದವರಾಗಿದ್ದರು’ ಎಂದು ಹೇಳಿದರು.

ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಶು ವೈದ್ಯಾಧಿಕಾರಿ ಎಂ ವ್ಹಿ ಪಾಟೀಲ, ಪಿಎಸ್‌ಐ ಎಲ್ ಬಿ ಮಾಳಿ, ಪ. ಪಂ. ಸದಸ್ಯ ಸಲಿಂಬೇಗ ಜಮಾದಾರ, ಭಾಸ್ಕರ ಹಿರೇಮೆತ್ರಿ, ಸಂತೋ? ಚನ್ನಮೆತ್ರಿ, ಲಕ್ಕಪ್ಪ ಹುಣಶೀಕಟ್ಟಿ, ಲಕ್ಕಪ್ಪ ಜಗದಾರ, ಸುರೇಶ ಭಜಂತ್ರಿ, ರಫೀಕ ಡಿಕೆ, ಪುಂಡಲೀಕ ತಳವಾರ, ಮಹಾಂತೇಶ ಚನ್ನಮೇತ್ರಿ, ಅರುಣ ನೀಲಪ್ಪನ್ನವರ, ಯಲ್ಲಪ್ಪ ಪಟ್ಟಪನ್ನವರ, ಲಂಕೇಶ ಮೇತ್ರಿ, ಸುರೇಶ ತಮ್ಮಣ್ಣವರ, ಹನಮಂತ ನರೇರ, ಯಲ್ಲಪ್ಪ ಹೊಸಮನಿ, ಬೀಮಶೆಪ್ಪ ಮುಡೆನ್ನವರ ಸೇರಿದಂತೆ ಸಮಾಜದ ಹಿರಿಯರು ಹಾಗೂ ತಾಲೂಕಾ ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಇದ್ದರು.
೦೫ಯರಗಟ್ಟಿ ೦೧
ಪೋಟೋ ಶೇಷಿಕೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್