LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ಧಾಂತ ಅಳವಡಿಸಿಕೊಳ್ಳಿ


ಬಳ್ಳಾರಿ,ಮೇ 13 ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಂಡಿಹಟ್ಟಿ ಪ್ರೌಢಶಾಲೆಯ ಆಂಗ್ಲ ಭಾಷೆಯ ಶಿಕ್ಷಕ ಹೆಚ್.ಏಸಯ್ಯ ಅವರು ಹೇಳಿದರು.
ನಗರದ ಕೋಟೆ ಪ್ರದೇಶದ ಶ್ರೀ ಮೇಧಾ ಪದವಿ ಪೂರ್ವ ವಿದ್ಯಾಲಯದಲ್ಲಿ ಮೈ ಭಾರತ್ (ಮೇರಾ ಯುವ ಭಾರತ್) ಹಾಗೂ ಚಿಗುರು ಕಲಾತಂಡ ಇಬ್ರಾಹಿಂಪುರ ಇವರ ಸಂಯುಕ್ರಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಜೀವನದಲ್ಲಿ ಎದುರಿಸಿದ ಕಠಿಣ ಸವಾಲುಗಳು ಮತ್ತು ದುಃಖದ ಘಟನೆಗಳನ್ನು ನಾವೆಲ್ಲರೂ ಇಂದು ಸ್ಮರಿಸಬೇಕಾಗಿದೆ ಎಂದರು.
ಇದೇ ವೇಳೆ ಭಾರತದ ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದಲ್ಲಿ  ಮತದಾನ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಮ್ ಕಿರಣ್.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬ ಮಾನವನೂ ಸಮಾನವಾಗಿ ಬಾಳುವ ಹಕ್ಕನ್ನು ನೀಡಿದ್ದಾರೆ. ನಾವೆಲ್ಲರೂ ಪರಸ್ಪರ ಪ್ರೀತಿ ಮತ್ತು ಮಾನವೀಯತೆಯಿಂದ ಬದುಕಬೇಕು. ವಿದ್ಯಾರ್ಥಿಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
*ಕ್ರಾಂತಿ ಗೀತೆಗಳ ಗಾಯನ:*
ಜಾನಪದ ಕಲಾವಿದ ತಿಮ್ಮಲಾಪುರದ ಹನುಮಯ್ಯ ಅವರು ಅಂಬೇಡ್ಕರ್ ಅವರ ಹೋರಾಟದ ಬದುಕನ್ನು ಬಿಂಬಿಸುವ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಇವರ ಗಾಯನವು ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ನೀಡಿತು.
ಈ ಸಂದರ್ಭದಲ್ಲಿ ಮೇರಾ ಯುವ ಭಾರತ್ ಕೇಂದ್ರದ ಅಮರೇಶ್ವರ, ಚಿಗುರು ಕಲಾತಂಡದ ಅಧ್ಯಕ್ಷ ಹುಲುಗಪ್ಪ ಎಸ್.ಎಂ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್