LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜನಪರ ಸೇವೆಗಳನ್ನು ಮುಕ್ತವಾಗಿ ಗುರುತಿಸಲು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಕರೆ

ಕಾಶಿ ಪೀಠದಿಂದ ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ


 

ಧಾರವಾಡ : ಸಮಾಜದಲ್ಲಿ ನಡೆಯುವ ವಿವಿಧ ಕ್ಷೇತ್ರಗಳ ಜನಪರ ಸೇವೆಗಳನ್ನು ಮುಕ್ತವಾಗಿ ಗುರುತಿಸಿ ಪ್ರೋತ್ಸಾಹಿಸಬೇಕೆಂದು ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾಗಿರುವ ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಕರೆನೀಡಿದರು.

ಅವರು ಉತ್ತರಪ್ರದೇಶದ ವಾರಾಣಾಸಿ ನಗರದಲ್ಲಿರುವ ತಮ್ಮ ಶ್ರೀಪೀಠದಲ್ಲಿ ಮಹಾಶಿವರಾತ್ರಿ ಆಚರಣೆಯ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಸಮಾರಂಭದಲ್ಲಿ ಬಾರ್ಶಿಯ ವಿಶ್ವಮಾತಾ ವಾರಕರೀ ಆಧ್ಯಾತ್ಮಿಕ ಬಾಲಿಕಾ ಸಂಸ್ಥೆಯ ಸಂಸ್ಥಾಪಕಿ ಶಿವಭಕ್ತಿ ಪರಾಯಣಿ ಶಿವಲೀಲಾ ಪಾಟೀಲ ಅವರಿಗೆ 2026ನೆಯ ಸಾಲಿನ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡುತ್ತಿದ್ದರು. ಮನುಷ್ಯನ ವ್ಯಕ್ತಿತ್ವವನ್ನು ಲಿಂಗ, ಜಾತಿ, ವರ್ಗಗಳ ಆಧಾರದ ಮೇಲೆ ವಿಂಗಡಿಸದೇ ಸಾಧನೆಯ ವಿಶಿಷ್ಟ ಪ್ರತಿಭೆಯಿಂದ ಗುರುತಿಸಿದಾಗ ವ್ಯಕ್ತಿತ್ವಕ್ಕೆ ವ್ಯಾಪಕ ಗೌರವ ಪ್ರಾಪ್ತವಾಗುತ್ತದೆ ಎಂದರು.

ಶಿವಲೀಲಾ ಪಾಟೀಲರು ಶಿವ ಕೀರ್ತನಕಾರರ ಪುತ್ರಿ. ಕೇವಲ 5ನೆಯ ವಯಸ್ಸಿನಿಂದಲೇ ಕೀರ್ತನೆ ಹೇಳಲು ಆರಂಭಿಸಿದ್ದು, ಕಳೆದ 20ವರ್ಷಗಳಿಂದ ಮಹಾರಾಷ್ಟ್ರದಾದ್ಯಂತ ಹಿಂದೂ ಸಂಸ್ಕೃತಿಯ ಸಂರಕ್ಷಣೆಗಾಗಿ ಕೀರ್ತನೆ ಮಾಡುತ್ತಿದ್ದಾರೆ. ತಮ್ಮ ಕೀರ್ತನ ಕಲೆಯ ಅಭಿವ್ಯಕ್ತಿಗೆ ಪ್ರಾಪ್ತವಾಗುವ ಸಂಭಾವನೆಯ ಸಂಪೂರ್ಣ ಹಣದಲ್ಲಿ ಸುಮಾರು 150 ಬಡ ಬಾಲಕಿಯರಿಗೆ ಉಚಿತವಾಗಿ ವಸತಿ, ಊಟ, ಬಟ್ಟೆಗಳನ್ನು ನೀಡಿ, ಶಾಲಾ ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ವಿದ್ಯೆಯ ತರಬೇತಿ ನೀಡುತ್ತಿದ್ದಾರೆ. ಶಿವಲೀಲಾ ಪಾಟೀಲರ ಈ ಜನಸ್ನೇಹಿ ಕೈಂಕರ್ಯವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದೂ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.

ಕಾಶಿಪೀಠದ ಕಿರಿಯ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದರು. ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿ, ಚೆನ್ನಗಿರಿಯ ಶ್ರೀ ಬಸವ ಜಯಚಂದ್ರ ಸ್ವಾಮೀಜಿ, ಶಹಾಪುರದ ಶ್ರೀ ಸುಗುರೆಶ್ವರ ಶಿವಾಚಾರ್ಯ ಸ್ವಾಮೀಜಿ, ಪ್ರಶಸ್ತಿಯ ಪ್ರಾಯೋಜಕ ಪಂಢರಪುರದ ದಾನಚಿಂತಾಮಣಿ ಸುಭಾಷ್ ಮ್ಹಮಾಣೆ, ಶಿವಲೀಲಾ ಪಾಟೀಲರ ತಾಯಿ ವರ್ಷಾ ಪಾಟೀಲ, ಪೀಠದ ವ್ಯವಸ್ಥಾಪಕ ಆರ್. ಕೆ. ಸ್ವಾಮಿ, ಶಿವಾನಂದ ಹಿರೇಮಠ, ಪರೀಕ್ಷಾ ವಿಭಾಗದ ಮುಖ್ಯಸ್ಥ ಸೊಲಾಪುರದ ರಾಜೇಂದ್ರ ಬಲಸೂರೇ, ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ತೆಲಂಗಾಣ ರಾಜ್ಯಗಳಿಂದ ಆಗಮಿಸಿದ್ದ ಭಕ್ತಗಣ ಇದ್ದರು. ಶಿವಲೀಲಾ ಪಾಟೀಲ ಅವರ ವಿದ್ಯಾಲಯದ ನೂರಕ್ಕೂ ಹೆಚ್ಚು ಬಾಲಕಿಯರು ಭಜನೆ-ಕೀರ್ತನೆಯನ್ನು ಪ್ರಸ್ತುತಪಡಿಸಿದರು.

ಉತ್ತರಪ್ರದೇಶದ ವಾರಾಣಾಶಿಯಲ್ಲಿರುವ ಕಾಶಿ ಜ್ಞಾನಪೀಠದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಮಂಗಳವಾರ ಶಿವಭಕ್ತಿ ಪರಾಯಣಿ ಶಿವಲೀಲಾ ಪಾಟೀಲ ಅವರಿಗೆ 2026ನೆಯ ಸಾಲಿನ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ ಮಾಡಿದರು. ಕಿರಿಯ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಗಣ್ಯರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್