LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

’ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನವನ್ನು  ಪರಿಪಾಲಿಸಿ -ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮೀಜಿ 

ಬಬಲೇಶ್ವರ : ’ಮೊಬೈಲ್ ಬಿಡಿ ಪುಸ್ತಕ ಹಿಡಿ’ ಎಂಬ ವಿವೇಚನಾಪೂರ್ಣ ಚಿಂತನೆಯನ್ನು  ಮಕ್ಕಳ ಮನದಲ್ಲಿ ಮೂಡಿಸಿದಾಗ ಅವರ ಭವಿತವ್ಯದ ಬಾಗಿಲು ತೆರೆದಂತೆ. ಓದುವಲ್ಲಿನ ಆಸಕ್ತಿ ಬದುಕನ್ನು ಬರೆದು ಬಾಳನ್ನು ಬೆಳಗಿಸಬಲ್ಲದು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಬಬಲೇಶ್ವರದ ಜಾನಕಿ ಶ್ರೀರಾಮ ವಿದ್ಯಾ ಮಂದಿರದ ೩೫ ನೇ ವಾರ್ಷಿಕೋತ್ಸವ ಹಾಗೂ ೭ ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.

ಮಕ್ಕಳು ಮೊದಲು ಗುರುವಿನ ಗುಲಾಮನಾಗಬೇಕು. ಇಷ್ಟಪಟ್ಟು ಓದಿದಾಗ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಿಕೊಳ್ಳಲು ಸಾಧ್ಯ. ಸತತ ಓದು ವಿದ್ಯಾರ್ಥಿಗಳ ಗುರಿಗೆ ಸಾಧನೆಯ ಮೆಟ್ಟಿಲಾಗಬಹುದು ಎಂದರು.

ಗಲಗಲಿಯ ನಂದಿ ಶುಗರ್ಸ್ ಪ್ಯಾಕ್ಟರಿಯ ನಿರ್ದೇಶಕ ರಮೇಶ ಬಡ್ರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮನಸು ಬಿಳಿಹಾಳೆ ಇದ್ದ ಹಾಗೆ. ಪ್ರೀತಿಯೆಂಬ ಲೆಕ್ಕಣಿಕೆಯಿಂದ ಬದುಕಿನ ಮುನ್ನುಡಿ ಬರೆಯಬೇಕು. ಆಗ ಅವರ ಕನಸು ನಾಳೆಯ ನನಸಾಗಿ ಜೀವನದ ಅಭ್ಯುದಯಕ್ಕೆ ನಾಂದಿಯಾಗಬಲ್ಲದು. ಪಾಲಕರು ಮಕ್ಕಳು ಶಾಲೆಗೆ ಹೋಗಿದ್ದಾರೆ ಎಂದು ಸುಮ್ಮನೆ ಕೂರದೆ ಅವರ ಬಗ್ಗೆ ಕಾಳಜಿ ವಹಿಸಬೇಕೆಂದರು.

ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ತಮಗೊಂಡ ಅಧ್ಯಕ್ಷತೆ ವಹಿಸಿದ್ದರು. ಶಿರಬೂರ ಪಿ.ಕೆ.ಪಿ.ಎಸ್.ಅಧ್ಯಕ್ಷ ರಾಮನಗೌಡ ಪಾಟೀಲ ಆರೋಗ್ಯ ಅಧಿಕಾರಿ ಡಾ.ಅಪ್ಪಾಸಾಹೇಬ ಇನಾಮದಾರ, ಡಾ. ಪವನ ಬಳ್ಳೂರ, ಕೆ.ಎಂ.ಎಫ್.ನಿರ್ದೇಶಕ ಸಿದರಾಯ ಜಂಗಮಶೆಟ್ಟಿ, ಅಮಸಿದ್ದ ಕಣಬೂರ ಅತಿಥಿಯಾಗಿದ್ದರು. ಈ ವೇಳೆ ಹಲವಾರು ಸಾಧಕರನ್ನು ಸನ್ಮಾನಿಸಲಾಯಿತು. ಹಾಗೂ ಹತ್ತಲವು ಸ್ಪರ್ಧೆಗಳಲ್ಲಿ ಭಾಗವಹಿಸಿ, ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮತ್ತು ಸಾಮಾನ್ಯ ಜ್ಞಾನ ಮತ್ತು ಆಟೋಟಗಳಲ್ಲಿ ವಿಜೇತರಾದ ಮಕ್ಕಳಿಗೆ  ಬಹುಮಾನ ವಿತರಿಸಲಾಯಿತು. ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಿಪಂ ಮಾಜಿ ಸದಸ್ಯ ಮಲ್ಲು ಕನ್ನೂರ ಸ್ವಾಗತಿಸಿದರು. ಶಿಕ್ಷಕ ಬಿ.ಎ. ಬಡಚಿ ನಿರೂಪಿಸಿದರು. ಮುಖ್ಯಶಿಕ್ಷಕ ಎಸ್.ಎಂ.ಕೋಟ್ಯಾಳ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್