LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬರ ಮುನ್ಸೂಚನೆ; ಯಲಬುರ್ಗಾ, ಕುಕನೂರು ತಾಲ್ಲೂಕಿನಲ್ಲಿ ಕ್ರೀಯಾಯೋಜನೆ ರೂಪಿಸಲು ಶಾಸಕರ ಸೂಚನೆ

ಕೊಪ್ಪಳ ಜುಲೈ 04: ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಮುಂಬರುವ ಮೂರು ತಿಂಗಳ ವರೆಗೆ ಕುಡಿಯುವ ನೀರಿನ ಪೂರೈಕೆ, ಬೆಳೆ ವಿಮಾ ನೋಂದಣಿ, ಬಿತ್ತನೆಗೆ ರಸಗೊಬ್ಬರದ ಲಭ್ಯತೆ ಸೇರಿದಂತೆ ಬರ ನಿರ್ವಹಣೆಗೆ ಅಗತ್ಯ ಕ್ರೀಯಾಯೋಜನೆ ರೂಪಿಸಬೇಕು ಎಂದು ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಪ್ರಕೃತಿ ವಿಕೋಪದ ನಿರ್ವಹಣೆಯ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ (ಜು. 3ರಂದು) ಯಲಬುರ್ಗಾ ತಾಲೂಕು ಮಟ್ಟದ  ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಪ್ರಸ್ತುತ ಮಳೆಯ ಕೊರತೆಯಿಂದಾಗಿ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಬೆಳೆ ಹಾನಿ ಎಷ್ಟಾಗಬಹುದು ಎಂಬ ವಿವರವನ್ನು ಹೆಕ್ಟರ್ ವಾರು ಸಂಗ್ರಹಿಸಿ, ಆ ಬೆಳೆ ನಷ್ಟಕ್ಕೆ ಎಷ್ಟು ಕೋಟಿ ರೂಪಾಯಿ ಪರಿಹಾರವನ್ನು ಒದಗಿಸಬೇಕಾಗುತ್ತದೆ. ಇದಕ್ಕೆ ಇನ್ಸೂರೆಸ್ ಎಷ್ಟು ಪಾವತಿಯಾಗಬಹುದು ಎಂಬ ಬೇರೆ ಬೇರೆ ವಿಷಯಗಳನ್ನು ಕ್ರೀಯಾ ಯೋಜನೆಯಲ್ಲಿ ಸೇರಿಸಿ ಸಲ್ಲಿಸಬೇಕೆಂದರು.
ಡಿಬಿಓಟಿ ಯೋಜನೆಗೆ ಸಂಬಂಧಿಸಿದಂತೆ ಮೇಲ್ಮಟ್ಟದ ಜಲಾಗಾರಗಳಲ್ಲಿ ನೀರಿರುತ್ತದೆ. ಆ ನೀರು ಪೈಪ್‌ಲೈನ್ ಮೂಲಕ ಹಳ್ಳಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಇದ್ದಕ್ಕೆ ಕಾರಣ ಜೆಜೆಎಂ ಕಾಮಗಾರಿಗಳು ಸರಿಯಾದ ರೀತಿಯಲ್ಲಿ ಕೈಗೊಳ್ಳದಿರುವುದಾಗಿದೆ. ಹಾಗಾಗಿ ಯಾವ ಯಾವ ಪ್ರದೇಶಗಳಲ್ಲಿ ಜೆಜೆಎಂ ಕಾಮಗಾರಿಗಳು ಕಳಪೆಯಾಗಿವೆ. ಅವುಗಳನ್ನು ಗುರುತಿಸಿ, ಕುಡಿಯುವ ನೀರಿನ ಪೈಪ್‌ಲೈನ್ ಸರಿಪಡಿಸಿ, ಎಲ್ಲಾ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ವ್ಯವಸ್ಥೆಯನ್ನು ಮಾಡಬೇಕು. ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳ ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿಗಳ ತಹಶೀಲ್ದಾರರು, ತಾ.ಪಂ ಇಓ.ಗಳು, ಪ.ಪಂ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು, ಇಂಜಿನಿಯರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ