LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ 

ರಾಮದುರ್ಗ :ತಾಲೂಕಿನ ಸುರೇಬಾನ-ಮನಿಹಾಳ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಸುರೇಬಾನ ಪೊಲೀಸ್ ಠಾಣೆ ಸಹಯೋಗದಲ್ಲಿ ಡ್ರಗ್ಸ್ ವ್ಯಸನ ಮುಕ್ತ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಗಿತ್ತು.ಈ ವೇಳೆ ಮಾದಕ ವಸ್ತು ಸೇವನೆ ದುಷ್ಪರಿಣಾಮಗಳು,  ಮುಕ್ತಿ ಹಾಗೂ ಪರಿಹಾರಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸುರೇಬಾನ ಪೊಲೀಸ್ ಠಾಣೆ ಪಿ ಎಸ್ ಆಯ್ ಗುರುರಾಜ ಕಲಬುರ್ಗಿ ಅವರು ವಿದ್ಯಾರ್ಥಿಗಳನ್ನುದೇಶಿಸಿ ಮಾತನಾಡಿ ಡ್ರಗ್ಸ್ ವ್ಯಸನ ದುಷ್ಪರಿಣಾಮಗಳು ಹಾಗೂ ಅದರಿಂದ ದೂರವಿರುವುದು ಹೇಗೆ ಎಂಬುದರ ಕುರಿತು ವಿವರವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದದ್ದ ಕಾಲೇಜಿನ ಪ್ರಾಚಾರ್ಯರಾದ ನಾಗರಾಜ ಹಕ್ಕೇರ ಅವರು ಮಾತನಾಡಿ ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಒದಗಿದ ಮೇಲೆ, ಸಮಸ್ಯೆಯ ಸುಳಿಯಲ್ಲಿ ಸಿಲುಕಿ ಬಿಡಿಸಿಕೊಳ್ಳಲು ಹೆಣಗುವದಕ್ಕಿಂತ ಮೊದಲೇ ಪೂರ್ವ ಜಾಗೃತಿಯನ್ನು ಹೊಂದುವುದು ಮುಖ್ಯವೆಂದು ಎಚ್ಚರಿಕೆ ಮಾತುಗಳನ್ನಾಡಿದರು. ಪ್ರಬಂಧ ಸ್ಪರ್ಧೆಯಲ್ಲಿ ರಾಣಿ ಗಂಜಿ ಪ್ರಥಮ ಸ್ಥಾನ, ಅಮೃತಾ ಡಿ ದ್ವಿತೀಯ ಸ್ಥಾನ ಹಾಗೂ ಸಹನಾ ಭಜಂತ್ರಿ ತೃತೀಯ ಸ್ಥಾನವನ್ನು  ಪಡೆದುಕೊಂಡಿದ್ದಾರೆ.ಈ ಸಂದರ್ಭದಲ್ಲಿ ಪಿ ಎಸ್ ಆಯ್ ಗುರುರಾಜ ಕಲಬುರ್ಗಿ, ಎ ಎಸ್ ಆಯ್  ಎಲ್ ಟಿ ಪವಾರ್, ಶಂಕರ ಮೆಣಸಿನಕಾಯಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ  ಉಪನ್ಯಾಸಕರಾದ ಡಾ. ಅಶ್ವಿನಿ ಟಿ ಜಿ, ಡಾ. ಪ್ರವೀಣಕುಮಾರ ಕೋಟಿ, ಪ್ರಕಾಶ ವಡ್ಡರ, ಎಸ್ ಬಿ ಪಾಟೀಲ, ಸಾವಿತ್ರಿ ಪಾಟೀಲ, ಬೋಧಕೇತರ ಸಿಬ್ಬಂದಿ ಮಹಾಲಕ್ಷ್ಮೀ ಮುನವಳ್ಳಿಮಠ ಉಪಸ್ಥಿತರಿದ್ದರು. ರಮೇಶ ಬಡಿಗೇರ ನಿರೂಪಿಸಿದರು, ಬಸವರಾಜ ಕರಿಗಾರ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್