LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಒಳ ಮೀಸಲಾತಿ ರೋಸ್ಟರ್ ಪದ್ಧತಿ ಸರಿಪಡಿಸಿ ನೇಮಕಾತಿ ನಡೆಸಿ : ಡಿಎಸ್ಎಸ್ ಗುರುಮೂರ್ತಿ ಅಗ್ರಹ 

 ಬಳ್ಳಾರಿ ಏ. 08.: ರಾಜ್ಯ ಸರ್ಕಾರ ನೇಮಕ ಮಾಡಲು ಉದ್ದೇಶಿಸಿರುವ 56432 ಹುದ್ದೆಗಳನ್ನು ಕಡ್ಡಾಯವಾಗಿ ಒಳ ಮೀಸಲಾತಿ ಅಡಿಯಲ್ಲಿ ರೋಸ್ಟರ್ ಪದ್ಧತಿಯನ್ನು ಸರಿಪಡಿಸಿ ನೇಮಕಾತಿಯನ್ನು ನಡೆಸಬೇಕೆಂದು ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಆಗ್ರಹಿಸಿದರು.


 ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿ, ನಿವೃತ್ತ  ನ್ಯಾಯಮೂರ್ತಿ ಎಚ್ಎಸ್ ನಾಗಮೋಹನ್ ದಾಸ್  ಆಯೋಗವು ಶಿಫಾರಸ್ಸು ಮಾಡಿದ ಪ್ರಕಾರ ಪರಿಶಿಷ್ಟ ಜಾತಿ ಅಲೆಮಾರಿ ಅರೆ  ಅಲೆಮಾರಿ ಜಾತಿಗಳಿಗೆ ಪರಿಶಿಷ್ಟ ಜಾತಿಯ ಶೇಕಡಾ 17ರ ಪೈಕಿ ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಒಂದು ಮೀಸಲಾತಿ ಕಲ್ಪಿಸಿ ನೂತನ ಆದೇಶವನ್ನು ಹೊರಡಿಸಬೇಕು ಈ ಒಳ ಮೀಸಲಾತಿಯ ಕುರಿತು  ಯಾವುದೇ ಅವಸರ ಮತ್ತು ಅವಘಡಕ್ಕೆ ಎಡೆ ಮಾಡಿಕೊಡದೆ ಉಪಚುನಾವಣೆ ಮುಗಿದ ನಂತರ ಒಳ ಮೀಸಲಾತಿ ಮತ್ತು ರೋಸ್ಟರ್ ಪದ್ಧತಿಯನ್ನು ಸರಿಪಡಿಸಿ ನೇಮಕಾತಿಯನ್ನು ನಡೆಸಿ ಪರಿಶಿಷ್ಟ ಜಾತಿಯ ಎಲ್ಲಾ ಒಳಪಂಗಡಿಗಳಿಗೂ ಅನುಕೂಲ ಮಾಡಿಕೊಡಬೇಕೆಂದರು.


 ಡಾಕ್ಟರ್ ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ನ್ಯಾಯದೊಂದಿಗೆ ನಿರುದ್ಯೋಗ ನಿವಾರಿಸಿ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಎಲ್ಲರಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸಿ ಕೊಡಬೇಕು, ಆದರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಶೇಕಡ 5ರಷ್ಟು ಪರಿಶಿಷ್ಟ ಪಂಗಡಕ್ಕೆ ಶೇಕಡಾ 4ರಷ್ಟು ಮೀಸಲಾತಿಯನ್ನು ಹೆಚ್ಚಿಸಿ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡಿದರು, ಈ ಹೆಚ್ಚಾದ ಮೀಸಲಾತಿಯು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಶೇಕಡ 50 ಅನ್ನು ಮೀರಿ ಹೋಗಿರುತ್ತದೆ ಆದರೂ ಸಹ ಈ ಮೀಸಲಾತಿಯನ್ನು ಸಂವಿಧಾನದ ಶೆಡ್ಯೂಲ್ 9ರ ಅಡಿಯಲ್ಲಿ ತಂದಿದ್ದರೆ ಮೀಸಲಾತಿಯನ್ನು ಜಾರಿಗೊಳಿಸಬಹುದಿತ್ತು , ಆದರೆ ಬಿಜೆಪಿ ಸರ್ಕಾರ ಆ ಕೆಲಸ ಮಾಡದೆ ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದರು.

 ಈಗಲೂ ಕಾಲ ಮಿಂಚಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ವ ಪಕ್ಷದ ಸಂಸದರ ನಿಯೋಗದೊಂದಿಗೆ ಪ್ರಧಾನಿಯನ್ನು ಭೇಟಿ ಮಾಡಿ ಶೆಡ್ಯೂಲ್  9ರಲ್ಲಿ ಸೇರಿಸಲು ಒತ್ತಾಯಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನ್ಯಾಯ ದೊರೆಕಿಸಿ ಕೊಡಬೇಕೆಂದು ಆಗ್ರಹಿಸಿದರು.

 ಈ ಪತ್ರಿಕಾಗೋಷ್ಠಿಯಲ್ಲಿ ಶ್ರೀಧರ ಕಲಿ ವೀರ ಹನುಮಂತಪ್ಪ ಕಾಕರಗಲ್ ಬಳ್ಳಾರಿ ಜಿಲ್ಲಾ ಸಂಚಾಲಕರಾದ ಗೋವರ್ಧನ್ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್