LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಾತಿಗಣತಿ ಹಿನ್ನೆಲೆ ದಸರಾ ರಜೆ ವಿಸ್ತರಣೆ

ಬೆಂಗಳೂರು, (ಅಕ್ಟೋಬರ್ 07): ಕರ್ನಾಟಕದಲ್ಲಿ  ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ  ನಡೆಯುತ್ತಿದ್ದು, ಇಂದು ಕೊನೆ ದಿನವಾಗಿದೆ. ಆದ್ರೆ, ನಿರೀಕ್ಷೆಯಂತೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದೆ. ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ. ಈಗಾಲೇ ದಸರಾ ರಜೆಯಲ್ಲಿ ವಿದ್ಯಾರ್ಥಿಗಳಿಗೆ ಇದೀಗ ಜಾತಿಗಣತಿಯ ರಜೆ ಸಿಕ್ಕಂತಾಗಿದೆ.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಇಂದು ಕೊನೆ ದಿನವಾಗಿದ್ದರಿಂದ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ತೀರ್ಮಾನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗುವುದಿಲ್ಲ.

ಇನ್ನು ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅ.18ರವರೆಗೆ ಎಲ್ಲಾ ಶಾಲೆಗಳಿಗೆ (ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ) ರಜೆ ವಿಸ್ತರಣೆ ಮಾಡಲಾಗುವುದು. ರಜೆ ವಿಸ್ತರಣೆ ಮಾಡಬೇಕೆಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಮನವಿ ಆಧರಿಸಿ ಅ.18ರವರೆಗೆ ಶಾಲೆಗಳಿಗೆ ರಜೆ ನೀಡಲಾಗುವುದು. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಪೂರ್ಣ ಕೆಲಸ ಆಗಬೇಕು ಅಂದ್ರೆ ರಜೆ ವಿಸ್ತರಿಸುವಂತೆ ಕೇಳಿದ್ದಾರೆ. ಹಾಗಾಗಿ ನಾಳೆಯಿಂದ ಅಕ್ಟೋಬರ್​ 18ರವರೆಗೆ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಪಿಯುಸಿ ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಿಯಾಗುವಂತಿಲ್ಲ. ಇನ್ನು ಬೆಂಗಳೂರಿನಲ್ಲಿ 6,700 ಶಿಕ್ಷಕರು ಸಮೀಕ್ಷೆ ಭಾಗಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್