LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಮಾಜದಲ್ಲಿ ಬದಲಾವಣೆಗೆ ಶಿಕ್ಷಣವೇ ಪ್ರಬಲ ಅಸ್ತ್ರ- ಎಸ್‌ಪಿ ರವೀಂದ್ರ ಗಡಾದೆ 

ಅಥಣಿ : ಬಡ ಮಕ್ಕಳ ಶಿಕ್ಷಣಕ್ಕೆ ಎಲ್ಲರೂ ಆಸರೆಯಾಗುವ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಿದ್ದು, ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಎಲ್ಲತರದಿಂದಲೂ ಸಹಾಯಕ್ಕೆ ಸಿದ್ದ ಎಂದು ಎಸ್‌ಪಿ ರವೀಂದ್ರ ಗಡಾದೆ ಹೇಳೀದರು.
 ತಾಲೂಕಿನ ತೆಲಸಂಗ ಗ್ರಾಮದ ಸರ್ಕಾರಿ ಕನ್ನಡ ಶಾಸಕರ ಮಾದರಿ ಶಾಲೆಯಲ್ಲಿ ಆಂತರಿಕ ಭದ್ರತಾ ವಿಭಾಗದ (ಧಾರವಾಡ ವಲಯ) ಪೊಲೀಸ್ ಅಧೀಕ್ಷಕ ರವೀಂದ್ರ ಗಡಾದೆ ಜನ್ಮದಿನದ ಪ್ರಯುಕ್ತ ಗ್ರಾಮಸ್ಥರು ಹಮ್ಮಿಕೊಂಡಿದ್ದ ಬಡ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಶಿಕ್ಷಣದಿಂದ ಯಾವೊಬ್ಬ ಮಗುವೂ ವಂಚಿತರಾಗಬಾರದು. ಸಾಕ್ಷರ ಸಮಾಜದಿಂದ ಮಾತ್ರ ದೇಶದ ಉತ್ತಮ ಭವಿಷ್ಯ ಸಾಧ್ಯ, ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಣವೇ ಪ್ರಬಲ ಅಸ್ತ್ರವಾಗಿದೆ. ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಸಮೃದ್ಧ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಬಡತನ ಎಂಬುದು ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಗ್ರಾಮಸ್ಥರು ಹಮ್ಮಿಕೊಂಡಿರುವ ಈ ಕಾರ್ಯ ಶ್ಲಾಘನೀಯ ಎಂದರು.
   ಈ ವೇಳೆ ಡಾ. ಆರ್.ಡಿ. ಪೂಜಾರಿ, ರಾಜಕುಮಾರ ಪರ್ನಾಕರ, ಎ.ಆರ್. ಜೋಶಿ, ಸಿದ್ದರಾಮಯ್ಯ ಪೂಜಾರಿ, ಗುರುಯ್ಯ ಮಠಪತಿ, ಬಸವರಾಜ್ ಅವಟಿ, ಡಾ. ಪ್ರಕಾಶ್ ಪರನಾಕರ್, ಶಿವಾನಂದ ಪೂಜಾರಿ, ಸಂಗಮೇಶ್ ಉಂಡೋಡಿ, ಜಗದೀಶ ಪೂಜಾರಿ, ಕಾಶಿಲಿಂಗ ಲೋಕಂಡೆ, ಭೀಮಪ್ಪಾ ಬನಗೊಂಡ, ಶ್ರವಣ ಪರ್ನಾಕರ, ರಾಜು ಹೊನಕಾಶಂಬಳೆ ಸೇರಿದಂತೆ ಅನೇಕ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್