LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ

ಹುಬ್ಬಳ್ಳಿ: ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಪ್ರಭಾಕರ ಬಿ. ಕೋರೆಯವರ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ (Governing Council) ಸಭೆ ನಡೆಯಿತು.

ಸಭೆಯಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ, ನಾವೀನ್ಯತೆ ಹಾಗೂ ಸಂಸ್ಥೆಯ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಮಹತ್ವದ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

news_1784559552_0_612.webp

ಸಭೆಯಲ್ಲಿ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ. ಅಶೋಕ ಎಸ್. ಶೆಟ್ಟರ್, ಕುಲಪತಿಗಳಾದ ಡಾ. ಪ್ರಕಾಶ ಜಿ. ತೇವಾರಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ, ಖ್ಯಾತ ಲೇಖಕಿ, ಸಮಾಜಸೇವಕಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಶ್ರೀಮತಿ ಸುಧಾ ಮೂರ್ತಿ ಸೇರಿದಂತೆ ಆಡಳಿತ ಮಂಡಳಿಯ ಗಣ್ಯ ಸದಸ್ಯರು ಹಾಗೂ ವಿವಿಧ ಘಟಕಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಡಾ. ಪ್ರಭಾಕರ ಬಿ. ಕೋರೆಯವರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಇದೇ ವೇಳೆ ಶ್ರೀಮತಿ ಸುಧಾ ಮೂರ್ತಿಯವರು ತಮ್ಮ "Tides of Time" ಕೃತಿಯ ಪ್ರತಿಯನ್ನು ಡಾ. ಕೋರೆಯವರಿಗೆ ಉಡುಗೊರೆಯಾಗಿ ನೀಡಿ ಶುಭ ಹಾರೈಸಿದರು. ಈ ಅಪರೂಪದ ಕ್ಷಣವು ಸಭೆಯ ವಿಶೇಷ ಆಕರ್ಷಣೆಯಾಗಿ ಗಮನ ಸೆಳೆಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ