LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಬರಗಾಲದಲ್ಲಿ ವ್ಹಿಬಿಜಿ, ರಾಮ್ ಜಿ ಯೋಜನೆಯಡಿ ಗ್ರಾಮದಲ್ಲೇ ಉದ್ಯೋಗ"

ಇಂಡಿ  : -ವ್ಹಿಬಿಜಿ, ರಾಮ್ ಜಿ ಯೋಜನೆಯಡಿ ಬರಗಾಲದಲ್ಲಿ ಗ್ರಾಮದಲ್ಲೇ ಉದ್ಯೋಗ.   ಮಾಹದೇವಪ್ಪ ಏವೂರ ಸರ್ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ರವರು ಮಾತನಾಡಿ ತಾಲೂಕಿನಲ್ಲಿ  ಬರಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ಜಾರಿಯಲ್ಲಿರುವ ವಿಬಿ-ಜಿ ರಾಮ್‌ಜಿ ಯೋಜನೆ ಅಡಿಯಲ್ಲಿ ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಗ್ರಾಮ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಿ ಯೋಜನೆಯ ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು.

ಅದೇ ರೀತಿ  ಯೋಜನೆಯಡಿ ಕೇವಲ ಉದ್ಯೋಗವ? ಅಲ್ಲದೆ ಗ್ರಾಮೀಣ ಭಾಗದಲ್ಲಿ ಬಾಳಿಕೆ ಬರುವ ಮೂಲಸೌಕರ್ಯಗಳ ನಿರ್ಮಾಣಕ್ಕೂ ಆದ್ಯತೆ ನೀಡಲಾಗಿದೆ. ಫಲಾನುಭವಿಗಳು ತಮ್ಮ ಜೀವಿತಾವಧಿಯಲ್ಲಿ ೫ ಲಕ್ಷ ರೂ.ವರೆಗೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಅನುಮೋದಿತ ಕಾಮಗಾರಿಗಳಲ್ಲಿ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

     ಇಂಡಿ ತಾಲೂಕಿನ ಝಳಕಿ  ಗ್ರಾಮ ಪಂಚಾಯತ ಸಭಾ ಭವನದಲ್ಲಿ  ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ?ಯಂಡ್ ಅಜೀವಿಕಾ ಮಿ?ನ್(ಗ್ರಾಮೀಣ) ಕಾಯ್ದೆ ೨೦೨೫- ೨೬ನೇ ಸಾಲಿನ ವ್ಹಿ ಬಿಜಿ, ರಾಮಜಿ ಯೋಜನೆಯ ಐಇಸಿ ಚಟುವಟಿಕೆ ಅಡಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಹಾಗೂ ಕಾಯಕ ಬಂಧುಗಳಿಗೆ ಮತ್ತು ಅಕುಶಲ ಕೂಲಿಕಾರರಿಗೆ ಜಾಗೃತಿ ಅಭಿಯಾನ ಉದ್ದೆಶಿಸಿ ಮಾತನಾಡಿದರು.

       ಯೋಜನೆಯಡಿ ಜಾನುವಾರು ಶೆಡ್, ಎರೆಹುಳು ತೊಟ್ಟಿ, ತೋಟಗಾರಿಕೆ ವಿಸ್ತರಣೆ, ತೆರೆದ ಬಾವಿ, ಕೃಷಿ ಹೊಂಡ (ಫಾರ್ಮ್ ಪಾಂಡ್) ಸೇರಿದಂತೆ ವಿವಿಧ ವೈಯಕ್ತಿಕ ಕಾಮಗಾರಿಗಳನ್ನು ಒತ್ತು ೩೧೮  ಕಾಮಗರಿಗಳನ್ನು ಕೈಗೊಳ್ಳಬಹುದು, ಸಮುದಾಯ ಕಾಮಗಾರಿಗಳಲ್ಲಿ ಬರ ನಿಯಂತ್ರಣ ಕಾಮಗಾರಿ, ಮಣ್ಣಿನ ಚೆಕ್ ಡ್ಯಾಂ, ಮುಖ್ಯ ಕಾಲುವೆ, ಪ್ರವಾಹ ತಿರುವು ಚರಂಡಿ, ಜಲ ಕೊಯ್ಲು ಹೊಂಡ, ಸಮುದಾಯ ಮೆಟ್ಟಿಲು ಬಾವಿ ಪುನಶ್ಚೇತನ, ನೀರಾವರಿ ಬಾವಿ, ಸರ್ಕಾರಿ ಶಾಲೆಗಳ ಕಂಪೌಂಡ್ ಗೋಡೆ, ಅಡುಗೆ ಕೋಣೆ, ಶೌಚಾಲಯ ನಿರ್ಮಾಣ ಹಾಗೂ ಆಟದ ಮೈದಾನ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಉದ್ಯೋಗ ಪಡೆಯುವ ಅವಕಾಶವಿದೆ ಎಂದು ಮಾಹಿತಿ ನೀಡಿದರು.

               ಸಹಾಯಕ ನಿರ್ದೇಶಕರು ಸಂಜಯ ಖಡೆಗೆಕರ್  ಮಾತನಾಡಿ ಜುಲೈ -೧ ರಿಂದ ನರೇಗಾ ಯೋಜನೆ ಬದಲಾಗಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮೀ?ನ್ ಗ್ರಾಮೀಣ ಕಾಯ್ದೆ ೨೦೨೫ ವ್ಹಿಬಿ-ಜಿ, ರಾಮಜಿ ಯೋಜನೆ ಜಾರಿಗೆ ಬಂದಿರುವ ಕುರಿತು ತಿಳಿಸಿದರು, ಹೊಸ ಕೂಲಿ ದರ  ೩೭೦/- ರೂ ರಿಂದ ೩೮೨/- ರೂ ಗೆ ಹೆಚ್ಚಿಸಲಾಗಿರುವ ಕುರಿತು ಹಾಗೂ ಮಾನವ ದಿನಗಳನ್ನು ೧೦೦ ರಿಂದ ೧೨೫ಕ್ಕೆ ಹೆಚ್ಚಿಸಲಾಗಿರುವ ಬಗ್ಗೆ ಕರ ಪತ್ರ ಹಂಚಿಕೆ ಮಾಡಿ, ಒಂದು ಕುಟುಂಬವು ಒಂದು ಆರ್ಥಿಕ ವ?ದಲ್ಲಿ ೧೨೫ ದಿನಗಳು ಕೆಲಸ ನಿರ್ವಹಿಸಿದಲ್ಲಿ ರೂ. ೪೭೭೫೦/- ಗಳು ಸಿಗಲಿದೆ ಎಂದು ಕೂಲಿಕಾರರಿಗೆ ಯೋಜನೆಯ ಮಾಹಿತಿಯನ್ನು ತಿಳಿಸಿ ಕೆಲಸಕ್ಕೆ ಬರುವಂತೆ ಪ್ರೇರೇಪಿಸಿದರು. 

        ಗ್ರಾಮೀಣ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕುಟುಂಬಗಳಿಗೆ ಮೂಲಕ ವಲಸೆ ಹೋಗುವ ಪರಿಸ್ಥಿತಿಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ, ನಿರಂತರ ಕೂಲಿ ಉದ್ಯೋಗ ದೊರೆಯುವುದರಿಂದ ಕುಟುಂಬಗಳ ಆದಾಯ ಹೆಚ್ಚಳವಾಗಿ, ಜೀವನ ನಿರ್ವಹಣೆಗೆ ಆರ್ಥಿಕ ಭದ್ರತೆ ಒದಗುತ್ತದೆ. ವಿಬಿ-ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಜನರಿಗೆ ಉದ್ಯೋಗ ಭದ್ರತೆ, ಆದಾಯ ಹೆಚ್ಚಳ, ಕೃಷಿ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಹಾಗೂ ಶಾಶ್ವತ ಜೀವನೋಪಾಯದ ಅವಕಾಶಗಳನ್ನು ಕಲ್ಪಿಸುವ ಮೂಲಕ ಗ್ರಾಮೀಣ ಜೀವನಮಟ್ಟ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ವಿಬಿ-ಜಿ ರಾಮ್ ಜಿ ಯೋಜನೆಯ ಉದ್ದೇಶವು ಕೇವಲ ಉದ್ಯೋಗ ಒದಗಿಸುವುದಕ್ಕೆ ಸೀಮಿತವಾಗದೆ, ಗ್ರಾಮೀಣ ಪ್ರದೇಶಗಳಲ್ಲಿ ಶಾಶ್ವತ ಅಭಿವೃದ್ಧಿಗೆ ಪೂರಕವಾದ ಆಸ್ತಿಗಳ ನಿರ್ಮಾಣ ಹಾಗೂ ಗ್ರಾಮೀಣ ಜೀವನಮಟ್ಟ ಸುಧಾರಿಸುವುದಾಗಿದೆ ಎಂದು ತಿಳಿಸಿದರು.

      ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬಹುದು ಅಥವಾ ೮೨೭೭೫ ೦೬೦೦೦ ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಂಯೋಜಕರು ರಾಮಗೌಡ ಸರಬಡಗಿ ರವರು ತಿಳಿಸಿದರು.

       ಝಳಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಲಕ್ಷ್ಮಣ ಪಾಟೀಲ ಸರ್ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು.

       ಈ ಸಮಯದಲ್ಲಿ  ಸಣ್ಣಪ್ಪ ತಳವಾರ, ಅಪ್ಪಾಸಾಹೇಬ ಬನಸೋಡೇ, ಮಧುಕರ ಕೊಡತೇ, ಸಿಬ್ಬಂದಿ ಲಾಲಸಾಬ ಮುಲ್ಲಾ, ಮುದಕಣ್ಣ ತಳವಾರ, ಗ್ರಾಮದ ಮುಖಂಡರು, ಸ್ವ ಸಹಾಯ ಸಂಘದ ಸದಸ್ಯರು , ಕಾಯಕ ಬಂಧುಗಳು, ಗ್ರಾಮ ಕಾಯಕ ಮಿತ್ರ , ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್