LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅರ್ಹ ಮತದಾರರ ಹೆಸರು ಕೈಬಿಡದಂತೆ ನಿಗಾವಹಿಸಿ – ಶಾಸಕ ಜೆ.ಟಿ. ಪಾಟೀಲ

 ಬೀಳಗಿ-   ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಬಿಎಲ್‌ಎ-2ಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ನೈಜ ಮತದಾರರ ಹೆಸರು ಅನಗತ್ಯವಾಗಿ ಕೈಬಿಟ್ಟಿರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ. ಪಾಟೀಲ ಎಚ್ಚರಿಸಿದರು.
ತಾಲೂಕಿನ ಕೊರ್ತಿ ಪು.ಕೆ. ಸಮುದಾಯ ಭವನದಲ್ಲಿ ಭಾನುವಾರ ಬೀಳಗಿ ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರಿಗೆ (ಬಿಎಲ್‌ಎ) ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮೃತರಾದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಹಾಗೂ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಹೆಸರು ಹೊಂದಿರುವ ಮತದಾರರ ಹೆಸರನ್ನು ನಿಯಮಾನುಸಾರ ಒಂದೇ ಸ್ಥಳದಲ್ಲಿ ಉಳಿಸುವ ಕಾರ್ಯವನ್ನು ಪಾರದರ್ಶಕವಾಗಿ ಕೈಗೊಳ್ಳಬೇಕು. ಆದರೆ ಜೀವಂತವಾಗಿರುವ ಯಾವುದೇ ಅರ್ಹ ಮತದಾರ ತನ್ನ ಮತದಾನದ ಹಕ್ಕು ಕಳೆದುಕೊಳ್ಳದಂತೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಸೂಚಿಸಿದರು.
ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ನಾಗರಿಕರಿಗೆ ಸರ್ಕಾರಿ ಸೇವೆಗಳು ಹಾಗೂ ಸೌಲಭ್ಯಗಳನ್ನು ಪಡೆಯುವಲ್ಲಿಯೂ ತೊಂದರೆ ಉಂಟಾಗಬಹುದು. ಆದ್ದರಿಂದ ಅಧಿಕಾರಿಗಳು ಮನೆಮನೆಗೆ ತೆರಳಿ ಸಮಗ್ರ ಮಾಹಿತಿ ಸಂಗ್ರಹಿಸಿ ನೈಜ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಚ್.ಆರ್. ನಿರಾಣಿ ಮಾತನಾಡಿ, ಚುನಾವಣಾ ಆಯೋಗವು ಪಾರದರ್ಶಕ ಹಾಗೂ ವಿಶ್ವಾಸಾರ್ಹ ಚುನಾವಣೆ ನಡೆಸುವ ಉದ್ದೇಶದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದೆ. ಈ ಪ್ರಕ್ರಿಯೆಯಿಂದ ಮೃತ ಹಾಗೂ ಬೋಗಸ್ ಮತದಾರರ ಹೆಸರುಗಳನ್ನು ತೆಗೆದುಹಾಕಲು ಸಾಧ್ಯವಾಗುತ್ತದೆ. ಆದರೆ ಯಾವುದೇ ಒತ್ತಡ ಅಥವಾ ವೈಯಕ್ತಿಕ ಪ್ರಭಾವಕ್ಕೆ ಒಳಗಾಗಿ ಅರ್ಹ ಮತದಾರರ ಹೆಸರನ್ನು ಕೈಬಿಡಬಾರದು. ರಾಜಕೀಯ ಪಕ್ಷಗಳ ಬಿಎಲ್‌ಎಗಳು ಸರಿಯಾದ ಮಾಹಿತಿ ಸಂಗ್ರಹಿಸಿ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬಿಡೇಕರ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಈಗಾಗಲೇ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಪ್ರಸ್ತುತ ಮೂರನೇ ಹಂತದ ಕಾರ್ಯ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್‌ಒಗಳು ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ಅಕ್ಟೋಬರ್ 3ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಪರಿಶೀಲನೆ ಹಾಗೂ ವಿಲೇವಾರಿ ನಡೆಸಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳ ಬಿಎಲ್‌ಎಗಳು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಬೇಕು. ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಉಳಿಯುವಂತೆ ಕಾರ್ಯನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ವಿನೋದ ಹತ್ತಳ್ಳಿ, ಚುನಾವಣಾ ಶಾಖೆಯ ಎಸ್‌ಎಲ್‌ಒ ವಿ.ಎಸ್. ಬಣಗಾರ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಎಲ್. ಕೆಂಪಲಿಂಗಣ್ಣವರ, ಬಿಜೆಪಿ ತಾಲೂಕು ಕಾರ್ಯದರ್ಶಿ ಮಿಥುನ್ ನಾಯಕ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬಿಎಲ್‌ಎಗಳು, ಬಿಎಲ್‌ಒಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್