LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಪ್ ಸ್ಟೈನ್  ಪೈಲ್ ವಿವಾದ: ಕೇಂದ್ರ ಸರ್ಕಾರದ ಮೌನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ






ಬಳ್ಳಾರಿ, ಮಾ.04:.. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ “ ಎಫ್ಸ್ಟಿಂಗ್  ಫೈಲ್   ಪ್ರಕರಣದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನ ಉಲ್ಲೇಖ ಹಾಗೂ 2017ರಲ್ಲಿ ನಡೆದ ಇಸ್ರೇಲ್ ಭೇಟಿಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ಕೇಂದ್ರ ಸರ್ಕಾರ ದೇಶದ ನಾಗರಿಕರಿಂದ  ಮುಚ್ಚಿಟ್ಟಿದೆ ಎಂದು ಆರೋಪಿಸಿ ಬಳ್ಳಾರಿ ಜಿಲ್ಲೆ ನಗರ ಮತ್ತು ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನಗರದ ರಾಯಲ್ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು  ನಡೆಸಲಾಯಿತು.


 ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ  ಹೆಸರನ್ನು  ಉಲ್ಲೇಖಿಸಲಾಗಿದೆ, ಇದು ದೇಶದ ಪ್ರಜಾಪ್ರಭುತ್ವ, ನೈತಿಕತೆ ಮತ್ತು ಪಾರದರ್ಶಕತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ ಎಂದು ಯುವ ಕಾಂಗ್ರೆಸ್ ನಾಯಕರು ಆರೋಪಿಸಿದರು.

 ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಸ್ಪಷ್ಟನೆ ನೀಡದೇ ಮೌನ ವಹಿಸಿರುವುದು ಖಂಡನೀಯ ಎಂದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ (ನಗರ) ಅಧ್ಯಕ್ಷ ಕೆ. ಶ್ರೀಕಾಂತ್,  ದೇಶದ ಪ್ರಧಾನ ಮಂತ್ರಿಯ ಹೆಸರು ಅಂತರಾಷ್ಟ್ರೀಯ ಮಟ್ಟದ ಗಂಭೀರ ಹಗರಣದಲ್ಲಿ ಉಲ್ಲೇಖವಾಗಿರುವಾಗ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಅಸಹ್ಯಕರ. ಇದು ಕೇವಲ ರಾಜಕೀಯ ವಿಚಾರವಲ್ಲ ದೇಶದ ಘನತೆ  ಗೌರವ ಹಾಗೂ ಪ್ರಜಾಪ್ರಭುತ್ವದ ಪಾರದರ್ಶಕತೆಗೆ ಸಂಬಂಧಿಸಿದಂತೆ  ದಕ್ಕೆ ತರುವಂತ  ವಿಷಯವಾಗಿದೆ. ಮೋದಿ ಸರ್ಕಾರ ತಕ್ಷಣ ಜನತೆಗೆ ಸತ್ಯವನ್ನು ತಿಳಿಸಿ ನೈತಿಕ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ಮೌನದ ವಿರುದ್ಧ ಕಾಂಗ್ರೆಸ್ ಯುವ ಘಟಕ ಆಕ್ರೋಶವನ್ನು ವ್ಯಕ್ತಪಡಿಸಿದೆ.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಸಂದರ್ಭದಲ್ಲಿ ಮಂಜುನಾಥ್  ಬಳ್ಳಾರಿ ಗ್ರಾಮ ಅಧ್ಯಕ್ಷ ಕುಮಾರ್ ಸ್ವಾಮಿ  ಬಸವರಾಜ್, ರುದ್ರಗೌಡ ಶಶಿಕುಮಾರ್ ಅಝರುದ್ದಿನ್, ಫಾರನ್  ಖಾನ್, ಖಾದರ್ ಫೈಝಲ್, ಅಬ್ದುಲ್ ಬರಿ, ಉಮೇಶ್ ಗೌಡ, ಗೋಪಾಲ್, ಬಸವರಾಜ್ ಸೇರಿದಂತೆ  ಇತರೆ ಪದಾಧಿಕಾರಿಗಳು  ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್