LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಲೆ ಸಂಸ್ಕೃತಿ ಬೆಳೆಸಲು ಎಲ್ಲರೂ ಶ್ರಮಿಸಲು ಬಿ. ನಾಗರಾಜ ಕರೆ

ಬಳ್ಳಾರಿ, ಜೂ.18: ಕಲೆ, ನಾಟಕ ಮತ್ತು ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ. ಇಂತಹ ಕಾರ್ಯಕ್ರಮಗಳು ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೆ ಗ್ರಾಮೀಣ ಪ್ರದೇಶಗಳಲ್ಲಿಯೂ ನಿರಂತರವಾಗಿ ನಡೆಯಬೇಕು ಎಂದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಹೇಳಿದರು.
ಅವರು ನಿನ್ನೆ ರಾತ್ರಿ ಕುರುಗೋಡು ತಾಲೂಕಿನ ಡಿ.ಕಗ್ಗಲ್ಲು ಗ್ರಾಮದಲ್ಲಿ ರಂಗ ಜಂಗಮ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಸಾಂಸ್ಕೃತಿಕೋತ್ಸವ–2026” ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶದಲ್ಲಿ ಸಾಂಸ್ಕೃತಿಕೋತ್ಸವವನ್ನು ಹಮ್ಮಿಕೊಳ್ಳುವ ಮೂಲಕ. ರಂಗ ಜಂಗಮ ಸಂಸ್ಥೆಯು ಎಲ್ಲ ಕಲಾವಿದರಿಗೂ ಉತ್ತಮ ವೇದಿಕೆಯನ್ನು ಕಲ್ಪಿಸುತ್ತಿದೆ ಎಂದರು.
ಪತ್ರಕರ್ತ ಕೆ.ಎಂ. ಮಂಜುನಾಥ ಮಾತನಾಡಿ, “ಅನೇಕ ಪ್ರತಿಭಾವಂತ ಕಲಾವಿದರನ್ನು ರಂಗಭೂಮಿಗೆ ನೀಡಿದ ಹೆಗ್ಗಳಿಕೆ ಬಳ್ಳಾರಿ ಜಿಲ್ಲೆಗೆ ಸಲ್ಲುತ್ತದೆ. ನಮ್ಮ ಗ್ರಾಮದಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.
ಶ್ರೀಧರಗಡ್ಡೆಯ ಸಾ.ಹಿ. ಪ್ರೌಢಶಾಲೆಯ ಮುಖ್ಯಗುರು ಎ. ಮಲ್ಲಪ್ಪ ಮಾತನಾಡಿ, ಇಂತಹ ಕಾರ್ಯಕ್ರಮಗಳು ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆಯಾಗಲಿ” ಎಂದು ಆಶಿಸಿದರು. ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಆಲಂಬಾಷ, ಶಿಕ್ಷಕರಾದ ಗಾದಿಲಿಂಗಪ್ಪ ಹಾಗೂ ನೃತ್ಯಗುರು ಅಭಿಷೇಕ್ ಉಪಸ್ಥಿತರಿದ್ದರು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಳ್ಳಾರಿಯ .ಸಿ. ಸುಂಕಣ್ಣ ಮತ್ತು ತಂಡದಿಂದ ಸಮೂಹ ನೃತ್ಯ, ಹುಲಿಗೆಮ್ಮ ಮತ್ತು ತಂಡದಿಂದ ತೋಗಲುಗೊಂಬೆ ಆಟ, ಎಸ್.ಎಂ. ಹುಲುಗಪ್ಪ ಮತ್ತು ತಂಡದಿಂದ ಜಾಗೃತಿ ಗೀತೆಗಳು, ಸಿಂದಗೇರಿಯ ವಿನಯ್ ಮತ್ತು ತಂಡದಿಂ ಸುಗಮ ಸಂಗೀತ, ಕುರುಗೋಡಿನ ವಿಜಯಕುಮಾರ್ ಮತ್ತು ತಂಡದಿಂದ ಜಾನಪದ ಡೊಳ್ಳು ಕುಣಿತ, ಹೂವ೮ನಹಡಗಲಿಯ ಪ್ರಕಾಶ್ ಎಂ. ಮತ್ತು ತಂಡದಿಂದ ರಂಗಗೀತೆಗಳು, ಅದೇ ಗ್ರಾಮದ .ಎಂ. ಸದಾನಂದ ಸ್ವಾಮಿ ಮತ್ತು ತಂಡದಿಂದ ತತ್ವಪದಗಳ ಗಾಯನ, ಸಿರಿಗೇರಿಯ ಎನ್. ಸುಮಂಗಲ ಮತ್ತು ತಂಡದಿಂದ ಪೌರಾಣಿಕ ಹಾಸ್ಯ ನಾಟಕ “ಶ್ರೀಕೃಷ್ಣ ಸಂಧಾನ” ಪ್ರದರ್ಶನಗೊಂಡವು.
ವೀರೇಶ್ ಮತ್ತು ತಂಡ ಪ್ರಾರ್ಥನೆ. ಡಾ. ಅಣ್ಣಾಜಿ ಕೃಷ್ಣಾರೆಡ್ಡಿ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಷ್ಣು ಹಡಪದ ಕಾರ್ಯಕ್ರಮವನ್ನು ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್