LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹೊಸತರದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರದ  ಚಿತ್ರ ಮಾತೊಂದ ಹೇಳುವೆ    

ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ 'ಮಾತೊಂದ ಹೇಳುವೆ'  ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ  ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ.

      ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ. ಜೂನ್ 13 ರಂದು ರಾಜ್ಯಾದ್ಯಂತ  'ಮಾತೊಂದ ಹೇಳುವೆ' ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಈಗಾಗಲೆ ಚಾಲನೆ ನೀಡಿದೆ.

     ತಾರಾಗಣದಲ್ಲಿ ಮಯೂರ್ ಕಡಿ ಅವರ ಜೊತೆಯಲ್ಲಿ ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್,  ಪ್ರತೀಕ್ ,ಕಾರ್ತಿಕ್ ಪತ್ತಾರ್ , ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ.

      "ಚಿತ್ರದ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ. ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ" ಎನ್ನುತ್ತಾರೆ ನಿರ್ದೇಶಕ ಹಾಗೂ ನಾಯಕ ಮಯೂರ್ ಕಡಿ.

     ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ  'ಮತೊಂದು ಹೇಳುವೆ' ಚಿತ್ರಕ್ಕೆ ಪ್ರಭು ಸವಣೂರ್ ಹಾಗೂ ಅವಿನಾಶ್ ಯು. ಎಸ್ ಅವರ ಸಹ ನಿರ್ಮಾಣವಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ನಿರ್ದೇಶನ ಹಾಗೂ ಅಭಯ್ ಕಡಿ ಸಂಕಲನವಿರುವ ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಮ್ ಎಸ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ