LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರೈತರು ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಯತ್ತ ಹಂತ ಹಂತವಾಗಿ ಹೆಜ್ಜೆ ಹಾಕಬೇಕಾಗಿದೆ : ಡಾ. ಎ.ಆರ್. ಕುರುಬರ


ಕೊಪ್ಪಳ ಜೂನ್ 18): ವಿಸ್ತರಣಾ ನಿರ್ದೇಶನಾಲಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ವಿಸ್ತರಣಾ ನಿರ್ದೇಶಕರಾದ ಡಾ. ಎ.ಆರ್. ಕುರುಬರ ಅವರ ನಿರ್ದೇಶನದಂತೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಆತ್ಮಯೋಜನೆ ಕೃಷಿ ಇಲಾಖೆ, ಕೃಷಿಕ್ ಸಮಾಜ ಸಹಯೋಗದಲ್ಲಿ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಬುಧವಾರ (ಜೂ. 17ರಂದು) “ಮುಂಗಾರು ಆಂದೋಲನ” ಎನ್ನುವ ವಿನೂತನ ಕಾರ್ಯಕ್ರಮ ಜರುಗಿತು.
 ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶೇಖರಗೌಡ ಮಾಲಿ ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಇಂದಿನ ಬದಲಾದ ಪರಿಸ್ಥಿತಿಯಲ್ಲಿ, ಗೊಬ್ಬರಗಳ ಒಂದು ಕೊರತೆಯ ಸಂದರ್ಭದಲ್ಲಿ ರೈತರು ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಯತ್ತ ಹಂತ ಹಂತವಾಗಿ ಹೆಜ್ಜೆ ಇಡುತ್ತ ಕೃಷಿಯನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಈ ನಿಟ್ಟಿನಲ್ಲಿ ಕೃಷಿ ವಿಸ್ತರಣಾ ಕೇಂದ್ರದ ವಿಜ್ಞಾನಿಗಳು, ಕೃಷಿ ಇಲಾಖೆ ಮತ್ತು ಸಂಬAಧ ಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಕೈಜೋಡಿಸಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಮತ್ತು ರೈತರು ಅದರ ಸಧುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
 ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನ ವಹಿಸಿದ ಕೊಪ್ಪಳ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿ.ಡಿ ಕೃಷ್ಣಮೂರ್ತಿ ಅವರು ಮಾತನಾಡಿ, ರೈತರು ಉತ್ತಮ ಬೀಜಗಳನ್ನು ಬಿತ್ತ ಬೇಕಲ್ಲದೆ, ಸಾವಯವ ಮತ್ತು ನೈಸರ್ಗಿಕ ಕೃಷಿಯತ್ತ ಗಮನಹರಿಸಿ ಹಂತ ಹಂತವಾಗಿ ತಮ್ಮ ಕುಟುಂಬಗೋಸ್ಕರವಾಗಿ ಯಾದರೂ ನೈಸರ್ಗಿಕ ಕೃಷಿ ಅನುಸರಿಸಲೇ ಬೇಕಾಗಿದೆ ಎಂದರು.
 ಇದೇ ಸಂದರ್ಭದಲ್ಲಿ ಇಲಾಖೆಯಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ಬೆಂಬಲ ಬೆಲೆ ಎನ್ನುವುದು ಬೇಡಿಕೆ ಮೇಲೆ ಕೇಂದ್ರ ಹಾಗೂ ರಾಜ್ಯ ಸರಕಾರ ನಿರ್ಧರಿಸುತ್ತವೆ ಎಂದು ರೈತರೊಬ್ಬರ ಪ್ರಶ್ನೆಗೆ ಉತ್ತರ ನೀಡಿದರು.
 ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ತಿಮ್ಮಣ್ಣ ಚವಡಿ ಅವರು ಮಾತನಾಡಿ, ರೈತರು ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಯನ್ನು ಕೈಗೊಳ್ಳಬೇಕು. ಎಂದು ನುಡಿದರು. ಇದೇ ಸಂದರ್ಭದಲ್ಲಿ, ಮಹಿಳೆಯರು ಒಣ ಹಾಕಿದ ಬಟ್ಟೆ ಹಾರಿ ಹೋದಾಗತಮ್ಮ ಮನೆಗೆ ಮರಳಿ ತೆಗೆದುಕೊಂಡು ಬರುತ್ತಾರೋ ಹಾಗೆಯೇರೈತರುತಮ್ಮ ಹೊಲದಿಂದಕೊಚ್ಚಿ ಹೋಗುವ ಮಣ್ಣನ್ನು ಮರಳಿ ತಂದು ಭೂಮಿಯ ಫಲವತ್ತತೆ ಹಾಳಾಗದಂತೆ ನೋಡಿಕೊಳ್ಳಬೇಕೆಂದು ಮಾರ್ಮಿಕವಾಗಿ ನುಡಿದರು.
 ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಬದರಿ ಪ್ರಸಾದ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಸ್ತರಣಾ ನಿರ್ದೇಶನಾಲಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ವಿಸ್ತರಣಾ ನಿರ್ದೇಶಕರಾದ ಡಾ. ಎ.ಆರ್. ಕುರುಬರ ಅವರ ನಿರ್ದೇಶನದಂತೆ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿಂದು “ಮುಂಗಾರು ಆಂದೋಲನ” ಎನ್ನುವ ವಿನೂತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರು ನಿರಂತರವಾಗಿ ಇಲ್ಲಿ ನಡೆಯುವ ತರಬೇತಿಗಳ ಮೂಲಕ ಕೃಷಿಯಲ್ಲಿ ಹೆಚ್ಚಿನತಾಂತ್ರಿಕತೆ ಅಳವಡಿಸಿಕೊಂಡು ಲಾಭ ಪಡೆದುಕೊಳ್ಳಬೇಕು. ರೈತರು ಯಾವುದೇ ವಿಷಯದ ಬಗ್ಗೆ ಇಲ್ಲಿ ತರಬೇತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
 ಇದೇ ಸಂದರ್ಭದಲ್ಲಿ ಇದೇ ತಿಂಗಳ ದಿನಾಂಕ 20 ರಂದು ಸಾವಯವ ಕೃಷಿ ಕುರಿತು ಶಿವಶಂಕರ್ ಕುರೇಶಿ, ಧಾರವಾಡರವರು ಶ್ರೀಪಾದ ಮುರುಡಿ, ಆಚಾರ್‌ತಿಮ್ಮಾಪು ರವರ ಹೊಲದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸುತ್ತಿದ್ದು ರೈತರು ಇದರ ಸದ್ವಿನಿಯೋಗ ಮಾಡಿಕೊಳ್ಳಬೇಕು. ಅಲ್ಲದೇ ಜುಲೈ 5ನೇ ತಾರೀಕು ಶ್ರೀನಿವಾಸ್ ಜಾಲಿಹಾಳ್ ನೆಲಗಲ್ ಗ್ರಾಮ ರವರ ತೋಟದಲ್ಲಿ ಮಣ್ಣಿನೊಂದಿಗೆ ಮಾತುಕತೆ ಎಂಬ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಂತ್ರಿಕತೆಯನ್ನು ತಿಳಿದುಕೊಳ್ಳಬೇಕೆಂದು ಕರೆ ನೀಡಿದರು.
 ಪ್ರಗತಿಪರ ರೈತರಾದ ಲಿಂಗಪ್ಪ, ಶ್ರೀನಿವಾಸ ಜಾಲಿಹಾಳ್, ಜಡೆ ಸ್ವಾಮಿ, ಬಸವರಾಜ ಗೊಂಡಬಾಳ ಅವರು ಸಾವಯವ ಕೃಷಿ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
 ಕೊಪ್ಪಳ ಕೃಷಿಕ ಸಮಾಜದ ಉಪಾಧ್ಯಕ್ಷರಾದ ವಿರೂಪಣ್ಣ ನವೋದಯ ಹಾಗೂ ಎಫ್.ಪಿ.ಓ ರಾಜ್ಯ ನಿರ್ದೇಶಕರಾದ ಶಿವರಾಮ ರವರು ಕಾರ್ಯಕ್ರಮದಲ್ಲಿ ಮಾತನಾಡಿದರು.
 ತಾಂತ್ರಿಕ ಗೋಷ್ಠಿಯಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೇಸಾಯ ಶಾಸ್ತ್ರ ವಿಭಾಗದ ಡಾ. ರಾಘವೇಂದ್ರ ಅವರು ಗೋಡಂಬಿ ಬೇಸಾಯದ ಕುರಿತು ಉಪನ್ಯಾಸ ನೀಡಿದರು. ಕೋರಮಂಡಲ ಕಂಪನಿಯ ಪ್ರತಿನಿಧಿ ಡಾ. ಅವಿನಾಶ ಅವರು ರಾಸಾಯನಿಕ ಗೊಬ್ಬರಗಳು ಮತ್ತು ನ್ಯಾನೋ ಗೊಬ್ಬರಗಳ ಬಗ್ಗೆ ತಾಂತ್ರಿಕ ಉಪನ್ಯಾಸ ನೀಡಿದರು.
 ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ಎಲ್ಲ ತಾಲೂಕಿನ ಅಧ್ಯಕ್ಷರು, ಕೃಷಿ ಸಂಬAಧಿತ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಅಲ್ಲದೆ 130ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮತ್ತು ರೈತ ಮಹಿಳೆಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್