LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮರದ ನಿರ್ಮಿತಿ ಕುಸಿದು ಐವರು ಸಾವನ್ನಪ್ಪಿ, 40 ಮಂದಿಗೆ ಗಾಯ

ಭಗ್ಪತ್​(ಉತ್ತರ ಪ್ರದೇಶ): ಜೈನ ಸಮುದಾಯದ ಕಾರ್ಯಕ್ರಮಕ್ಕೆ ನಿರ್ಮಿಸಲಾಗಿದ್ದ ಮರದ ನಿರ್ಮಿತಿ ಕುಸಿದು ಐವರು ಸಾವನ್ನಪ್ಪಿ, 40 ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಭಗ್ಪತ್​ನ ಬರುತ್ ಎಂಬಲ್ಲಿ ಮಂಗಳವಾರ ಸಂಜೆ​ ನಡೆಯಿತು.


ಈ ಕುರಿತು ಜಿಲ್ಲಾಧಿಕಾರಿ ಅಸ್ಮಿತ ಲಾಲ್ ಪ್ರತಿಕ್ರಿಯಿಸಿ, "ಮಂಗಳವಾರ ಸಂಜೆ ಈ ಘಟನೆ ನಡೆಯಿತು. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ 20 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ" ಎಂದರು.


ಭಗ್ಪತ್​​ ಎಸ್​ಪಿ ಅರ್ಪಿತ ವಿಜಯ್​ವರ್ಗೀಯಾ ಮಾತನಾಡಿ, "ಘಟನೆಯ ತನಿಖೆ ನಡೆಯುತ್ತಿದೆ. 2-3 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ತಿಳಿಸಿದರು.


ಕಳೆದ 30 ವರ್ಷಗಳಿಂದಲೂ ಬರುತ್​ನಲ್ಲಿ ಜೈನ ಸಮುದಾಯ ಲಡ್ಡು ಮಹೋತ್ಸವ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ಬಾರಿ ಮರದ ನಿರ್ಮಿತಿ ಕುಸಿದಿದ್ದು, ಘಟನೆ ಸಂಭವಿಸಿತು. ಜಿಲ್ಲಾಡಳಿತ ಮತ್ತು ಅಗ್ನಿ ಶಾಮಕದಳ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ನಡೆಸಿದೆ" ಎಂದು ಅವರು ಮಾಹಿತಿ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್