LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಏರ್ ಶೋ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಬಂದ್

ಬೆಂಗಳೂರು, ಜನವರಿ 28: ‘ಏರೋ ಇಂಡಿಯಾ 2025’ ಏರ್ ಶೋಗೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 10 ರಿಂದ 14 ರವರಗೆ ಯಲಹಂಕದಲ್ಲಿ ಏರ್ ಶೋ ನಡೆಯಲಿರುವ ಕಾರಣ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ವಿಮಾನಗಳ ಕಾರ್ಯಾಚರಣೆ ಮೇಲೆಯೂ ಪರಿಣಾಮವಾಗಲಿದೆ. ಏರ್ ಶೋ ವೇಳೆ‌‌‌ ನಿಗದಿತ ಸಮಯದಲ್ಲಿ ವಿಮಾನಗಳ‌ ಹಾರಾಟ ಬಂದ್ ಆಗಲಿದೆ. ಲ್ಯಾಂಡಿಂಗ್ ಹಾಗೂ ಟೇಕಾಫ್​ಗಳು ಇರುವುದಿಲ್ಲ. ಹೀಗಾಗಿ ಏರ್​​ಲೈನ್ಸ್ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಬರುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ. ಏರ್ ಶೋ ವೇಳೆ ವಾಯುಪಡೆ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಕೆಂಪೇಗೌಡ ಏರ್​​ಪೋರ್ಟ್​​ನಿಂದ ಟೇಕಾಫ್ ಮತ್ತು ಲ್ಯಾಂಡಿಂಗ್ ಸ್ಥಗಿತಗೊಳಿಸಲಾಗುತ್ತದೆ.

ಪೆಬ್ರವರಿ 5 ರಿಂದ 8 ರವರೆಗೆ ಬೆಳಗ್ಗೆ 9 ಗಂಟೆಯಿಂದ 12 ಮತ್ತು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೂ ವಿಮಾನಗಳ ಹಾರಾಟಕ್ಕೆ ನಿರ್ಬಂಧವಿದೆ. ಪೆಬ್ರವರಿ 09 ರಂದು ಬೆಳಗ್ಗೆ 9 ರಿಂದ 12 ಗಂಟೆವರೆಗೂ ವಿಮಾನಗಳ ಹಾರಾಟ ಸ್ಥಬ್ದವಾಗಲಿದೆ.





ಪೆಬ್ರವರಿ 13 ಮತ್ತು 14 ರಂದು ಬೆಳಗ್ಗೆ 9 ರಿಂದ 12 ಗಂಟೆ ಮತ್ತು ಮದ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆ ಇರುವುದಿಲ್ಲ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್