LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲೇ ಕೆಆರ್‌ಎಸ್‌ ಡ್ಯಾಮ್‌ ಭರ್ತಿ

ಮಂಡ್ಯ, ಜೂನ್ 27: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಡ್ಯಾಂ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿ ದಾಖಲೆ ಬರೆದಿದೆ. ಇದರೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೂ ದಾಖಲೆಯೊಂದನ್ನು ಬರೆಯುವ ಅವಕಾಶ ಒದಗಿಬಂದಿದೆ. ಮುಂದಿನ 3 ದಿನಗಳ ಒಳಗಾಗಿ ಬಾಗಿನ ಅರ್ಪಿಸಿದರೆ, ಜೂನ್ ತಿಂಗಳಲ್ಲಿಯೇ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ. ಜೂನ್​ನಲ್ಲೇ ಬಾಗಿನ ಅರ್ಪಿಸುವ ಅವಕಾಶ ಈವರೆಗೆ ಯಾವ ಮುಖ್ಯಮಂತ್ರಿಗೂ ದೊರೆತಿಲ್ಲ.





ಸಾಮಾನ್ಯವಾಗಿ ಕೆಆರ್​ಎಸ್ ಡ್ಯಾಂ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸಲಾಗುತ್ತದೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST