LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವ ಖಂಡ್ರೆ ಸೂಚನೆ

ಬೆಂಗಳೂರು, ಆ.2: ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದ್ದು, ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ತಮ್ಮ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಿದ್ದು, ಚಾರಣಕ್ಕೂ ಕಡಿವಾಣ ಬೀಳುವ ಸಾಧ್ಯತೆ ಇದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ