LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅನಾರೋಗ್ಯದಿಂದ ನರಳುತ್ತಿದ್ದ ಅನಾಥ ವೃದ್ಧೆಗೆ ನೆರವಾದ ಮಾಜಿ ಮೇಯರ್ ರಾಜೇಶ್ವರಿ

ಬಳ್ಳಾರಿ,ಮೇ,14: ನಗರದ ಬಿಮ್ಸ್ ಆಸ್ಪತ್ರೆ ಮುಂಭಾಗದ ಬಸ್ ನಿಲ್ದಾಣದಲ್ಲಿ ಅನಾರೋಗ್ಯದಿಂದ ನರಳುತ್ತಿದ್ದ ಅನಾಥ ವೃದ್ಧೆ ಮಹಿಳೆಗೆ ಚಿಕಿತ್ಸೆ ಒದಗಿಸುವ ಮೂಲಕ ಮಾಜಿ ಮೇಯರ್ ಎಂ. ರಾಜೇಶ್ವರಿ ಸುಬ್ಬರಾಯುಡು ಅವರು ಮಾನವೀಯತೆ ಮೆರೆದಿದ್ದಾರೆ.
ಸ್ಥಳೀಯ ಪತ್ರಕರ್ತರೊಬ್ಬರು ಘಟನೆ ಗಮನಿಸಿ ತಕ್ಷಣ 112 ಪೊಲೀಸ್ ವಾಹನಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಸರ್ಕಾರಿ 108 ಆಂಬುಲೆನ್ಸ್ ಸೇವೆಗೂ ಕರೆ ಮಾಡಿ ಸ್ಥಳಕ್ಕೆ ಕರೆಸಿದರು. ವಿಷಯ ತಿಳಿಯುತ್ತಿದ್ದಂತೆಯೇ ಮಹಾನಗರ ಪಾಲಿಕೆ ಸದಸ್ಯೆಯೂ ಆಗಿರುವ ಮಾಜಿ ಮೇಯರ್ ರಾಜೇಶ್ವರಿ ಅವರು ಸ್ಥಳಕ್ಕೆ ಧಾವಿಸಿ ವೃದ್ಧೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ತುರ್ತು ಚಿಕಿತ್ಸೆಗೆ ಬಿಮ್ಸ್ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡಿಗೆ ದಾಖಲಿಸಿ, ಸಂಬಂಧಪಟ್ಟ ವೈದ್ಯರಿಗೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದರು.
ಕಳೆದ ಒಂದು ವಾರದಿಂದ ಬಿಮ್ಸ್ ಆಸ್ಪತ್ರೆ ಎದುರಿನ ಬಸ್ ನಿಲ್ದಾಣದಲ್ಲೇ ಈ ವೃದ್ಧೆ ಅನಾರೋಗ್ಯದಿಂದ ನರಳುತ್ತಿದ್ದು, ಯಾವುದೋ ಗುರುತು ಇಲ್ಲದ ವಾಹನ ಡಿಕ್ಕಿ ಹೊಡೆದು ಎರಡು ಕಾಲು ಹಾಗೂ ಸೊಂಟಕ್ಕೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮಹಿಳೆಯನ್ನು ವಿಚಾರಿಸಿದ ಪೊಲೀಸ್ ಸಿಬ್ಬಂದಿಗೆ, ತಾನು ಕೊಳಗಲ್ಲು ಗ್ರಾಮದವಳು, ಉಪ್ಪಾರ ಸಮುದಾಯಕ್ಕೆ ಸೇರಿದವಳು ಹಾಗೂ ತನ್ನ ಹೆಸರು ಲಕ್ಷ್ಮೀದೇವಿ ಎಂದು ತಿಳಿಸಿದ್ದಾಳೆ.
ಬಟ್ಟೆಯಿಲ್ಲದೆ ಬಿಸಿಲಿನಲ್ಲಿ ನರಳುತ್ತಿದ್ದ ಈ ವೃದ್ಧೆಯನ್ನು ಪ್ರತಿದಿನ ಸಾವಿರಾರು ಜನರು ನೋಡುತ್ತಿದ್ದರೂ, ಯಾರೂ ಸಹಾಯಕ್ಕೆ ಮುಂದಾಗಿರಲಿಲ್ಲ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್ ನಿಲ್ದಾಣದ ಸುತ್ತಮುತ್ತ ವ್ಯಾಪಾರ ನಡೆಸುವ ಅಂಗಡಿ ಮಾಲೀಕರು, ಸಿಬ್ಬಂದಿ, ಬಸ್ ಚಾಲಕರು ಹಾಗೂ ನಿರ್ವಾಹಕರು ಸಹ ಮಹಿಳೆಯ ದುಸ್ಥಿತಿಯನ್ನು ಗಮನಿಸಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ನಡುವೆಯೇ ಸ್ಥಳೀಯ ಪತ್ರಕರ್ತ ಜಂಬುನಾಥ್ ಹಾಗೂ ಮಾಜಿ ಮೇಯರ್ ರಾಜೇಶ್ವರಿ ಅವರು ಮಾನವೀಯತೆ ತೋರಿಸಿ ವೃದ್ಧೆಗೆ ಚಿಕಿತ್ಸೆ ದೊರಕುವಂತೆ ಮಾಡಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್