LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಳಿಯ ಪ್ರತಾಪ್​ಗೆ ಮಕ್ಕಳಿಲ್ಲದ ಕೊರಗಿತ್ತು: ಮಾಜಿ ಸಚಿವ ಬಿ.ಸಿ.ಪಾಟೀಲ್


ದಾವಣಗೆರೆ: "ಪ್ರತಾಪ್​ ನನ್ನ ರಾಜಕೀಯ ಜೀವನದಲ್ಲಿ ಬಲಗೈ ಆಗಿದ್ದ. ಆತನಿಗೆ ಮಕ್ಕಳಾಗಿಲ್ಲ ಎಂಬ ಕೊರಗಿತ್ತು" ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.


ಚನ್ನಗಿರಿ ತಾಲೂಕಿನ ಕತ್ತಲಗೆರೆಯಲ್ಲಿ ಸೋಮವಾರ ತಡರಾತ್ರಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. "ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಪ್ರತಾಪ್ ನನಗೆ ಮಗನಂತಿದ್ದ. ಮನೆಯ ತೋಟ, ಎಲ್ಲವನ್ನೂ ಅವನೇ ನೋಡಿಕೊಳ್ಳುತ್ತಿದ್ದ. ಆತ್ಮಹತ್ಯೆ ಮಾಡಿಕೊಳ್ಳುವಂಥದ್ದೇನೂ ಇರಲಿಲ್ಲ. ಆದರೆ ಮಕ್ಕಳಾಗಲಿಲ್ಲ ಎಂಬ ಕೊರಗಿತ್ತು. ಇದಕ್ಕೆ ಸರೊಗಸಿ (ಬಾಡಿಗೆ ತಾಯ್ತತನ) ಮೂಲಕ ಮಗು ಪಡೆಯುವ ಪ್ರಕ್ರಿಯೆಗೆ ಬೆಂಗಳೂರಿನಲ್ಲಿ ವಕೀಲರನ್ನು ಭೇಟಿ ಮಾಡಿ ಮಾತನಾಡಿದ್ದರು. ಅವರು ನೀವು ಕೋರ್ಟ್​​ಗೆ ಬಂದು ಹೇಳಬೇಕಾಗುತ್ತದೆ ಎಂದಿದ್ದರು. ಇದಕ್ಕೆ ಒಪ್ಪಿದ್ದ ನಾವು ಕೋರ್ಟ್​ ಅನುಮತಿಗಾಗಿ ಕಾಯುತ್ತಿದ್ದೆವು. ಅಷ್ಟರಲ್ಲಿ ಊರಿಗೆ ಹೋಗಿ ಬರುವುದಾಗಿ ಹೇಳಿ ಈ ರೀತಿ ಮಾಡಿಕೊಂಡಿದ್ದಾನೆ" ಎಂದು ಬೇಸರ ವ್ಯಕ್ತಪಡಿಸಿದರು.





ಈ ಕುರಿತು ಬಿ.ಸಿ.ಪಾಟೀಲ್​ ಅವರ ಸಹಾಯಕ ನಾಗರಾಜ್ ಬಣಕಾರ್ ಪ್ರತಿಕ್ರಿಯಿಸಿ, "ಬಿ.ಸಿ.ಪಾಟೀಲ್​ ತಮ್ಮ ಇಬ್ಬರು ಅಳಿಯಂದಿರನ್ನು ಮಕ್ಕಳಂತೆ ನೋಡಿಕೊಳ್ಳುತ್ತಿದ್ದರು. ಬೆಳಗ್ಗೆ ಆರು ಗಂಟೆಗೆ ಸೌಮ್ಯ ಪಾಟೀಲ್​​​, ಸೃಷ್ಟಿ ಪಾಟೀಲ್​ ಮತ್ತು ಬಿ.ಸಿ.ಪಾಟೀಲ್ ಪತ್ನಿ ವನಜಾ ಪಾಟೀಲ್ ಬೆಂಗಳೂರಿಗೆ ಹೋಗಿದ್ದರು. ನಂತರ ಮಾವ ಅಳಿಯ ಒಟ್ಟಿಗೆ ಸೇರಿ ಉಪಹಾರ ಸೇವಿಸಿದ್ದರು. ಪ್ರತಾಪ್​ ಅವರು ಮಾವ ಪಾಟೀಲರಿಗೆ ಊರಿಗೆ ಹೋಗುವುದಾಗಿ ತಿಳಿಸಿ, ನಂತರ ಸ್ವಗ್ರಾಮ ಕತ್ತಲಗೆರೆಗೆ ಹೋಗಿ ವಾಪಸಾಗುತ್ತೇನೆ ಎಂದಿದ್ದರು. ಆದರೆ ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದು ನಮಗೆ ಆಘಾತ ಉಂಟುಮಾಡಿದೆ" ಎಂದು ತಿಳಿಸಿದ್ದಾರೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್