LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನರಾಗಿದ್ದಾರೆ. ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇತ್ತೀಚಿಗೆ ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನ ಮನೋಹರ್ ತಹಶೀಲ್ದಾರ್ ಅಗಲಿದ್ದಾರೆ.

ಬಲಿಜ ಸಮುದಾಯಕ್ಕೆ ಸೇರಿದ್ದ ತಹಶೀಲ್ದಾರ್‌ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಹಿಂದೆ ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್‌ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್‌ ತಹಶೀಲ್ದಾರ್‌ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ