LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಪಂಚಾಕ್ಷರಿ ಮಾರ್ಷಲ್ ಆರ್ಟ್ಸ್ ಬಳ್ಳಾರಿಯ ನಾಲ್ವರು ವಿದ್ಯಾರ್ಥಿಗಳ ಆಯ್ಕೆ

ಬಳ್ಳಾರಿ, ಮೇ 02: ಮಲೇಶಿಯಾದಲ್ಲಿ ನಡೆಯಲಿರುವ 22ನೇ ಅಂತರಾಷ್ಟ್ರೀಯ ಒಕಿನವ ಗೋಜು ರಾಯ್ ಇಪಾನ್ ಸಿಟಿ ಮುಕ್ತ ಕರಾಟೆ ಸ್ಪರ್ಧೆ–2026ಕ್ಕೆ ಬಳ್ಳಾರಿಯ ಶ್ರೀ ಪಂಚಾಕ್ಷರಿ ಮಾರ್ಷಲ್ ಆರ್ಟ್ಸ್ ಟ್ರಸ್ಟ್‌ನ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಕರಾಟೆ ಮಾಸ್ಟರ್ ಬಂಡ್ರಾಳ್ ಎಂ. ಮೃತ್ಯುಂಜಯ ಸ್ವಾಮಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಗಾಂಧಿನಗರದಲ್ಲಿರುವ ಟ್ರಸ್ಟ್ ಮೂಲಕ ಬಾಲ ಭಾರತಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕರಾಟೆ, ಯೋಗ ಮತ್ತು ಧ್ಯಾನ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳು ಮತ್ತು ವಿಶೇಷ ತರಬೇತಿ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಟ್ರಸ್ಟ್, ಈಗಾಗಲೇ ತನ್ನ ವಿದ್ಯಾರ್ಥಿಗಳನ್ನು ಶ್ರೀಲಂಕಾ, ಇಂಡೋನೇಷಿಯಾ, ಸಿಂಗಾಪುರ್, ಮಲೇಶಿಯಾ ಹಾಗೂ ಜಪಾನ್ ದೇಶಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕಳುಹಿಸಿ ಉತ್ತಮ ಸಾಧನೆ ಮಾಡಿಸಿದೆ ಎಂದು ಅವರು ಹೇಳಿದರು.
ಮೇ 8ರಿಂದ 10ರವರೆಗೆ ಮಲೇಶಿಯಾದ ತನಜುಂಗ್ ರಮಭೂತಾನ್ ಇಪಾನ್ ಸಿಟಿಯಲ್ಲಿ ನಡೆಯಲಿರುವ ಈ ಸ್ಪರ್ಧೆಗೆ ಬಾಲ ಭಾರತಿ ಕೇಂದ್ರೀಯ ವಿದ್ಯಾಲಯದ ನಯೋನಿಕ ಮಂಗಳ ಹಾಗೂ ನಕ್ಷತ್ರ ವರ್ಣ ಮಂಗಳ, ವೀರಶೈವ ವಿದ್ಯಾವರ್ಧಕ ಸಂಘದ ಪದವಿ ಪೂರ್ವ ಕಾಲೇಜಿನ ಪ್ರಜ್ವಲ ಗಣೇಶ್ ಮತ್ತು ಡ್ರೀಮ್ ವರ್ಲ್ಡ್ ಶಾಲೆಯ ಮುದಿಯಮಂ ದೇವಗನ್ ಶ್ರೀವತ್ಸ ಆಯ್ಕೆಯಾಗಿದ್ದಾರೆ.
ಟ್ರಸ್ಟ್ ಇದುವರೆಗೆ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಆತ್ಮರಕ್ಷಣಾ ಕಲೆಗಳ ತರಬೇತಿ ನೀಡಿದ್ದು, ಗ್ರಾಮೀಣ ಮತ್ತು ನಗರ ಭಾಗದ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು.
ಮಾಧ್ಯಮಗಳ ಸಹಕಾರವನ್ನು ಸ್ಮರಿಸಿದ ಮೃತ್ಯುಂಜಯ ಸ್ವಾಮಿ, ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಗೌರವಾಧ್ಯಕ್ಷ ವಿಕ್ರಮ ಮಹಿಪಾಲ್, ಸದಸ್ಯರಾದ ಹೆಚ್.ಎಂ. ಅಂಬರೀಶ್, ಚೈತನ್ಯ ಷಡಕ್ಷರಿ, ಆರ್.ಎಂ. ಬಸವರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್