LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಉಚಿತ ನೇತ್ರ ತಪಾಸಣಾ ಶಿಬಿರ


ರಾಮದುರ್ಗ,ಜು,೦೧:  ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ೫ ವರ್ಷ ಪೂರೈಸಿದ ಪ್ರಯುಕ್ತ ಸಹಕಾರ ಸಪ್ತಾಹ ಆಚರಣೆ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ರಾಮದುರ್ಗ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಜರುಗಿತು.
ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ. ಬೆಂಗಳೂರು, ಬೆಳಗಾವಿ ಸಹಕಾರ ಯುನಿಯನ್, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಕರ್ನಾಟಕ ರಾಜ್ಯ ಸೌಹಾರ್ಧ ಸಂಯುಕ್ತ ಸಹಕಾರಿ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಬೆಳಗಾವಿ ಯಶಸ್ವಿನಿ ಟ್ರಸ್ಟ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರಾಮದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹುಬ್ಬಳ್ಳಿ ಜಯಪ್ರಿಯಾ ಕಣ್ಣಿನ ಆಸ್ಪತ್ರೆ ಇವರ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಸಲಾಯಿತು.
ಸಹಕಾರ ಅಭಿವೃದ್ಧಿ ಅಧಿಕಾರಿ ಗಿರೀಶ ಯಾವಗಲ್ಲ ಶಿಬಿರ ಉದ್ಘಾಟಿಸಿದರು. ಡಿಸಿಸಿ ಬ್ಯಾಂಕ್ ತಾಲೂಕಾ ನಿಯಂತ್ರಣಾ ಅಧಿಕಾರಿ ಬಿ.ಬಿ. ಹಾಲೊಳ್ಳಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯಾಧಿಕಾರಿಗಳಾದ ಡಾ. ವೆಂಕಟರಾಮ ಕಟ್ಟಿ, ಡಾ. ಅಮರಜಿತ ಚೌವ್ಹಾಣ, ಬಸವರಾಜ ಹೂಗಾರ ಮತ್ತು ಡಿಸಿಸಿ ಬ್ಯಾಂಕ್ ಬಿಐ ಜಂಬಗಿ, ಪ್ರಕಾಶ್ ಹಾಗೂ ಪಿಕೆಪಿಸ್ ಕಾರ್ಯದರ್ಶಿಗಳಾದ ಮಾರುತಿ ರಡರಟ್ಟಿ, ಬಸವರಾಜ ಸೊಮಗೊಂಡ, ಮಾರುತಿ ಕೊಡ್ಲಿವಾಡ, ಮಲ್ಲಪ್ಪ ತಳವಾರ, ಬಿ.ಎಸ್. ದ್ಯಾವಣಗೌಡರ, ರಾಜೇಸಾಬ ದಾನಕಟಗಿ, ಎಂ.ಎಚ್. ಪೂಜೇರ, ಮಲ್ಲಪ್ಪ ಸಂಕದಾಳ, ಎಂ.ಜಿ. ಚಿನಗುಡಿ, ಶಿವಾನಂದ ಅವರಾದಿ  ಸೇರಿದಂತೆ ಪಿಕೆಪಿಎಸ್ ನ ಇತರ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್