ಬೆಂಗಳೂರು, (ಜನವರಿ 20): ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಮಾತೃತ್ವ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಾಯಂದಿರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಗರ್ಭಿಣಿಯರ ಆರೋಗ್ಯ ತಪಾಸಣಾ ಶಿಬಿರಗಳನ್ನ ದೊಡ್ಡಮಟ್ಟದಲ್ಲಿ ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸುವಂತೆ ಸೂಚನೆ ನೀಡಿದ್ದಾರೆ. ಮಾತೃತ್ವ ಸುರಕ್ಷಾ ಅಭಿಯಾನದಲ್ಲಿ ಗರ್ಭಿಣಿಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.