LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗೀತಾ ಸೇವಿ ಸಂಸ್ಕಾರ ಮತ್ತು ವೆಲ್ಫೇರ್ ಟ್ರಸ್ಟ ನಿಂದ  ಉಚಿತ ಮಿನರಲ್ ವಾಟರ್ ವಿತರಣೆ ಆರಂಭ

ಬಳ್ಳಾರಿ, ಮೇ 11.: ನಗರದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ಜನಸಾಮಾನ್ಯರಿಗೆ ನೆರವಾಗಲು ಗೀತಾ ಸೇವಿ ಸಂಸ್ಕಾರ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಉಚಿತ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆಗಳನ್ನು (ಏiosಞs) ಇಂದು ಯಶಸ್ವಿಯಾಗಿ ಅಳವಡಿಸಲಾಯಿತು.
ಟ್ರಸ್ಟ್ನ ಈ ಮೊದಲ ಬೃಹತ್ ಸಮಾಜಮುಖಿ ಯೋಜನೆಯು ಇಂದು ಅಧಿಕೃತವಾಗಿ ಚಾಲನೆಗೊಂಡಿತು. ಪ್ರಮುಖವಾಗಿ ಹಳೇ ಬಸ್ ನಿಲ್ದಾಣದ ಎದುರು ಹಾಗೂ ಗುಗ್ಗಿಹಟ್ಟಿ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಈ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು, ಬಾಯಾರಿದ ಹಾದಿಹೋಕರಿಗೆ ಹಾಗೂ ಕಾರ್ಮಿಕರಿಗೆ ಇದು ಆಸರೆಯಾಗಿದೆ.
ಈ ಸಂದರ್ಭದಲ್ಲಿ ಟ್ರಸ್ಟ್ನ ಶ್ರೀ  ಶ್ರೀನಿವಾಸ ದೇವಳೆ  ಮತ್ತು ಶ್ರೀ ಜಡೆಪ್ಪ ನವರು ಮಾತನಾಡಿ , "ಸೇವೆಯೇ ಪರಮ ಧರ್ಮ ಎಂಬ ಧ್ಯೇಯದೊಂದಿಗೆ ನಮ್ಮ ಟ್ರಸ್ಟ್ ಈ ಕಾರ್ಯಕ್ಕೆ ಮುಂದಾಗಿದೆ. ಈ ಬೇಸಿಗೆ ಮುಗಿಯುವವರೆಗೂ ಅಂದರೆ ಮೇ 25 ರವರೆಗೆ ಪ್ರತಿದಿನ ಈ ಶುದ್ಧ ನೀರಿನ ವಿತರಣೆ ನಿರಂತರವಾಗಿ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು," ಎಂದು ತಿಳಿಸಿದರು.
ನೀರು ವಿತರಿಸುವ ಸ್ಥಳಗಳು-ಹಳೇ ಬಸ್ ನಿಲ್ದಾಣದ ಎದುರು, ಗುಗ್ಗಿರಹಟ್ಟಿ ಮತ್ತು ನಗರದ ಇತರೆ ಪ್ರಮುಖ ಕೇಂದ್ರಗಳು. ಹಾಗೂ ಇಂದಿನಿಂದ ಆರಂಭಗೊಂಡು ಮೇ 25 ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ..

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್