LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಧರ್ಮಸ್ಥಳ ಯೋಜನೆ ವತಿಯಿಂದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮ.

ನೇಸರಗಿ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ)  ಯೋಜನಾ ವತಿಯಿಂದ  ಕೊಳದೂರ ಗ್ರಾಮದ  ಬಸವನಗರ  ಕಾರ್ಯಕ್ಷೇತ್ರದ ಶ್ರೀ ಚಿಗುರು ಶ್ರೀ ಕರೆಮ್ಮ ದೇವಿ ಜ್ಞಾನವಿಕಾಸ ಕೇಂದ್ರದಲ್ಲಿ ಮತ್ತು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ   ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ  ದ್ರಾಕ್ಷಾಯಿಣಿ ಮಜ್ಜಿಗಿ  ಉದ್ಘಾಟಕರಾಗಿ  ಗ್ರಾಮ ಪಂಚಾಯಿತಿ ಸಿಬ್ಬಂದಿಯಾದ ಶ್ರೀಮತಿ ಸುನಿತಾ ಅಗಸಿಮನೆ ಮುಖ್ಯ ಅತಿಥಿಗಳಾಗಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನಿರ್ಮಲಾ ಕಡಕೋಳ,  ತರಬೇತಿ ಶಿಕ್ಷಕರಾದ ಶ್ರೀಮತಿ ಶಶಿಕಲಾ ಪತ್ತಾರ, ತಾಲೂಕಿನ ಜ್ಞಾನವಿಕಾಸ ಸಮನ್ವೇದಿಕಾರಿ ಶ್ರೀಮತಿ ಶೈಲಾ ವಲಯದ ಮೇಲ್ವಿಚಾರಕರಾದ ಸೈಯದ ಅವರ ಸಮ್ಮುಖದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
       ಜ್ಞಾನವಿಕಾಸ ಸಮನ್ವೇದಿಕಾರಿ  ಶ್ರೀಮತಿ ಶೈಲಾ ಜಕ್ಕನವರ  ಮಾತನಾಡಿ   ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂಆದ ಅದರ ಸದುಪಯೋಗ  ಸ್ವ  ಉದ್ಯೋಗ ಆಧಾರಿತ ತರಬೇತಿಗಳು ಸಣ್ಣ ಪ್ರಮಾಣದ ಕೈ ಕೆಲಸ ಟೈಲರಿಂಗ್ ತರಬೇತಿ   ಇಂತಹ ಹತ್ತಾರು ಕಾರ್ಯಕ್ರಮಗಳನ್ನು ಕೈಗೊಂಡ ಪೂಜ್ಯ ವೀರೇಂದ್ರ ಹೆಗ್ಗಡೆ ಮಾತೃಶ್ರೀ ಹೇಮಾವತಿ ಅಮ್ಮನವರು  ಬಡವರಿಗೆಂದೇ ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ನಿಮ್ಮೆಲ್ಲರ ಭಾಗ್ಯ  ಕಾರ್ಯಕ್ರಮಗಳ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದರು.
      ವಲಯದ ಮೇಲ್ವಿಚಾರಕರಾದ ಸೈಯದ    ಮಾತನಾಡಿ  ಯೋಜನೆ ಕಾರ್ಯಕ್ರಮಗಳ ಬಗ್ಗೆ  ಸಮುದಾಯ ಅಭಿವೃದ್ಧಿ ಮಾಶಾಸನ ವಾತ್ಸಲ್ಯ, ಸುಜ್ಞಾನಿಧಿ ಶಿಷ್ಯವೇತನ ಜಲಮಂಗಳ ಆರೋಗ್ಯ ರಕ್ಷಾ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಬಗ್ಗೆ  ಕುರಿತು ಮಾಹಿತಿ ನೀಡಿದರು 
 ಈ ಸಂದರ್ಭದಲ್ಲಿ    ನಿರೂಪಣೆ ಸೇವಾ ಪ್ರತಿನಿಧಿ ಶ್ರೀಮತಿ ಲಕ್ಷ್ಮಿ ಮಾಸ್ತಮರಡಿ,  ಸ್ವಾಗತ ಶ್ರೀಮತಿ ನಿರ್ಮಲಾ ತಿಗಡಿ , ವಿಕಾಸ  ಕೇಂದ್ರದ  ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್