LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಿ.ಪಂ ನೂತನ ಸಿಇಓ ಗಜಾನನ ಬಾಲೆ ಅಧಿಕಾರ ಸ್ವೀಕಾರ

ಬಾಗಲಕೋಟೆ, ಜೂನ್ ೧೯ : ಬಾಗಲಕೋಟೆ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಜಿ.ಪಂ ಸಿಇಓ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯ ಶಂಕರ ಮತ್ತು ಸುಜಾತಾ ದಂಪತಿಗಳ ಮಗನಾದ ಗಜಾನನ ಬಾಲೆ ಅವರು ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ವಿಭಾಗದ ಇಂಜಿನೀಯರಿಂಗ್ ಪದವಿ, ೨೦೨೨ರಲ್ಲಿ ಐ.ಎ.ಎಸ್ ಪಡೆದಿದ್ದಾರೆ. ಪ್ರಾರಂಭದಲ್ಲಿ ರಾಯಚೂರು ಉಪವಿಭಾಗಾಧಿಕಾರಿಯಾಗಿ ನಂತರ ಬಾಗಲಕೋಟೆ ಯುಕೆಪಿಯ ಮಹಾ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ. ಸದ್ಯ ಬಾಗಲಕೋಟೆ ಜಿ.ಪಂ ಸಿಇಓ ಹುದ್ದೆಯ ಅಧಿಕಾರ ವಹಿಸಿಕೊಂಡು, ಈ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಯುಕೆಪಿಯ ಮಹಾ ವ್ಯವಸ್ಥಾಪಕರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು. ಸರಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದೊಂದಿಗೆ ಗ್ರಾಮೀಣಾಭಿವೃದ್ದಿ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ಸ್ವಚ್ಛತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ವಿಶೇಷ ಒತ್ತು ನೀಡಲಾಗುವುದೆಂದು ತಿಳಿಸಿದರು. ಜಿ.ಪಂ ವ್ಯಾಪ್ತಿಯ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಜನಸ್ನೇಹಿ ಆಡಳಿತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಯುಕೆಪಿಯ ಉಪ ಮಹಾ ವ್ಯವಸ್ಥಾಪಕ ಮಹಾದೇವ ಮುರಗಿ, ಕೃಷಿ ಇಲಾಖೆಯ ಉಪನಿರ್ದೇಶಕ ಕೆ.ಎಸ್.ಅಗಸನಾಳ, ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್