LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರ ಚಾಲನೆ: ಜಿ.ಪರಮೇಶ್ವರ್

ಬೆಂಗಳೂರು: ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದಿತು. ಕಳೆದ ಎರಡು ತಿಂಗಳು ಸರ್ಕಾರದ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿಲ್ಲ. ಈಗ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಆ ರೀತಿ ಏನು ಇಲ್ಲ. ಸಂದರ್ಭ ಅನುಸಾರ ಅಂತಹ ಮಾತುಗಳನ್ನು ಹೇಳಿರುತ್ತೀವಿ. ನಮ್ಮಲ್ಲಿ ಒಳ ಜಗಳಗಳು ಆಗಿಲ್ಲ. ತುಮಕೂರಿನ ಶಾಸಕ ಸುರೇಶ್‌ಗೌಡ, ನಮ್ಮ‌ ಪಕ್ಷದಲ್ಲಿನ ಒಳ ಜಗಳವನ್ನು ಎಲ್ಲಿ ನೋಡಿದ್ದಾರೋ, ಎಲ್ಲಿ ಆಗಿದೆಯೋ ಅವರಿಗೆ ಗೊತ್ತು. ಯಾವುದಾದರು ವಿಚಾರಗಳು ಬಂದಾಗ ಒಬ್ಬೊಬ್ಬರು ಅಭಿಪ್ರಾಯಗಳನ್ನು ಹಂಚಿಕೊಂಡಿರುವುದು ಸಹಜ. ಅಂತಹ ಸಂದರ್ಭದಲ್ಲಿ ಬಿಟ್ಟರೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಒಳ ಜಗಳಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಹಂಚಿಕೊಳ್ಳಲು ಕ್ಯಾಬಿನೆಟ್ ಇದೆ. ಪಕ್ಷಕ್ಕೆ ಸಂಬಂಧಪಟ್ಟ ತೀರ್ಮಾನಗಳನ್ನು ಕೈಗೊಳ್ಳಲು ಕೋರ್‌ಕಮಿಟಿ ಸಭೆ ಮಾಡಬಹುದು. ಇದಕ್ಕೆ ಅವಕಾಶಗಳನ್ನು ಪಕ್ಷದ ಅಧ್ಯಕ್ಷರು ಕೊಡಬೇಕಾಗುತ್ತದೆ. ಸಂದರ್ಭ ಬಂದಾಗ ಅವರು ಮಾಡುತ್ತಾರೆ ಎಂದರು. ಪ್ರಬಲ ಸಚಿವರ ಕ್ಷೇತ್ರಗಳಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿರುವುದಕ್ಕೆ ಸಮಿತಿ ರಚನೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ಜಿಲ್ಲೆ ಸೇರಿದಂತೆ 17 ಜಿಲ್ಲೆಗಳಲ್ಲಿ ಸೋತಿದ್ದೇವೆ. ಈ ಬಗ್ಗೆ ಪರಿಶೀಲನೆ ಮಾಡುವ, ಆತ್ಮಾವಲೋಕನಾ ಮಾಡಿಕೊಳ್ಳುವ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ನಾವೆಲ್ಲ ಅದನ್ನು ಒಪ್ಪುತ್ತೇವೆ. ಮುಂದೆ ನಮಗೆ ಏನು ಸಲಹೆ ಮಾಡುತ್ತಾರೆ. ಅದನ್ನು ಪಾಲನೆ ಮಾಡುವ ಪದ್ಧತಿ ನಮ್ಮ ಪಕ್ಷದಲ್ಲಿದೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ