LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪಹಲ್ಗಾಮ್‌ ದಾಳಿ ಖಂಡಿಸಿದ ಜಿ-7 ರಾಷ್ಟ್ರಗಳು

ನವದೆಹಲಿ: ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಜಿ7 ದೇಶಗಳು ಶನಿವಾರ ಒಕ್ಕೋರಲಿನಿಂದ ಖಂಡಿಸಿವೆ. ಜಿ7 ದೇಶಗಳಾದ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುಕೆ, ಯುಎಸ್ ಮತ್ತು ಯುರೋಪಿಯನ್ ಒಕ್ಕೂಟ ಭಾರತ ಮತ್ತು ಪಾಕಿಸ್ತಾನ ದೇಶಗಳು ಸಂಯಮ ಕಾಯ್ದುಕೊಳ್ಳಬೇಕೆಂದು ಕರೆ ನೀಡಿವೆ.


"G7 ದೇಶಗಳಾದ ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುಕೆ ಮತ್ತು ಅಮೆರಿಕದ ವಿದೇಶಾಂಗ ಮಂತ್ರಿಗಳು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಪ್ರತಿನಿಧಿಗಳಾದ ನಾವು, ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇವೆ ಮತ್ತು ಭಾರತ ಮತ್ತು ಪಾಕಿಸ್ತಾನ ಗರಿಷ್ಠ ಸಂಯಮ ಕಾಯ್ದುಕೊಳ್ಳಬೇಕೆಂದು ಕೋರುತ್ತೇವೆ" ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.


"ಮಿಲಿಟರಿ ಸಂಘರ್ಷ ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಒಡ್ಡುತ್ತದೆ. ಎರಡೂ ದೇಶಗಳ ನಾಗರಿಕರ ಸುರಕ್ಷತೆಯ ಬಗ್ಗೆ ನಮಗೆ ತೀವ್ರ ಕಳವಳವಿದೆ. ಶಾಂತಿ ಸ್ಥಾಪನೆಗೆ ಎರಡೂ ದೇಶಗಳು ಮಾತುಕತೆ ನಡೆಸಬೇಕು. ನಾವು ಸದ್ಯದ ಉದ್ವಿಗ್ನತೆ ಕಡಿಮೆ ಮಾಡಲು ಮತ್ತು ಶಾಂತಿ ಸ್ಥಾಪನೆಗೆ ಎರಡೂ ದೇಶಗಳು ಮಾತುಕತೆ ನಡೆಸುವಂತೆ ಕರೆ ನೀಡುತ್ತೇವೆ. ನಾವು ಈ ಬೆಳವಣಿಗೆಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸುತ್ತೇವೆ ಮತ್ತು ತ್ವರಿತ, ಶಾಶ್ವತ ರಾಜತಾಂತ್ರಿಕ ಪರಿಹಾರಕ್ಕಾಗಿ ನಮ್ಮ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.


ಇದಕ್ಕೂ ಮುನ್ನ, ಅಮೆರಿಕದ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್, ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮೆರಿಕ ಉದ್ದೇಶಿಸಿದೆ. ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಎರಡೂ ರಾಷ್ಟ್ರಗಳ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್