LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

 ಗೌರಿಯ ಮೊದಲ ಹಾಡು ಅನಾವರಣ

ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಸಮರ್ಜಿತ್ ಲಂಕೇಶ್ ನಾಯಕನಾಗಿರುವ 'ಗೌರಿ' ಚಿತ್ರದ ಮೊದಲ ಹಾಡು ಬೆಂಗಳೂರಿನ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜುನಲ್ಲಿ ಸಾವಿರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ.


  ಇಂದ್ರಜಿತ್ ಲಂಕೇಶ್, ಸಮರ್ಜಿತ್ ಲಂಕೇಶ್, ಸಾನ್ಯಾ ಅಯ್ಯರ್, ಅವಿನಾಶ್, ವಿಷ್ಣು ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಜಯ್ ಈಶ್ವರ್ ಬರೆದಿರುವ


 'ಟೈಮ್ ಬರತ್ತೆ' ಎಂಬ ಹಾಡು ಈ ಚಿತ್ರದ ಚೊಚ್ಚಲಗೀತೆಯಾಗಿ ಬಿಡುಗಡೆಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಯವಜನತೆಗೆ ಹತ್ತಿರವಾಗಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.


ಇಂದ್ರಜಿತ್ ಲಂಕೇಶ್ ಮಾತನಾಡಿ "ಗೌರಿ' ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದೆ. ಐದು ಜನ ಸಂಗೀತ ನಿರ್ದೇಶಕರು ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ.


ಭಾರತದ ಹನ್ನೆರಡಕ್ಕೂ ಅಧಿಕ ಹೆಸರಾಂತ ಗಾಯಕರು 'ಗೌರಿ' ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಇಂದು ಚಂದನ್ ಶೆಟ್ಟಿ ಸಂಗೀತ ನೀಡಿ ಹಾಡಿರುವ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ‌.


ಇದರ ಜೊತೆಗೆ ಈ ಹಾಡಿಗೆ ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಹಾಗೂ ನಟಿ ಸಂಯುಕ್ತ ಹೆಗಡೆ ರೀಲ್ಸ್ ಕೂಡ ಮಾಡಿದ್ದಾರೆ‌. ಈ ಹಾಡಿನ ಲಿರಿಕಲ್ ವಿಡಿಯೋ ಹಾಗೂ ರೀಲ್ಸ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಉಳಿದ ಹಾಡುಗಳು ಅನಾವರಣವಾಗಲಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌‌" ಎಂದರು.


     "ಗೌರಿ' ಚಿತ್ರದ ಮೊದಲ ಹಾಡಿಗೆ ಸಿಗುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ ನಿಮ್ಮೆಲ್ಲರ ಹಾರೈಕೆ ನಮ್ಮ ಚಿತ್ರಕ್ಕಿರಲಿ" ಎಂದರು ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್