LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಗಾಜಾ ನಿರಾಶ್ರಿತರ ಶಿಬಿರದ ಮೇಲೆ 63 ಬಾರಿ ಬಾಂಬ್ ದಾಳಿ: 91 ಪ್ಯಾಲೆಸ್ಟೈನಿಯರು ಮೃತ, 251 ಮಂದಿ ಗಾಯ

ಗಾಜಾ: ಇಸ್ರೇಲಿ ಸೇನೆಯು ಏಳು ದಿನಗಳಲ್ಲಿ ನುಸೇರಾತ್​ನ ಕೇಂದ್ರ ಗಾಜಾ ನಿರಾಶ್ರಿತರ ಶಿಬಿರದ ಮೇಲೆ 63 ಬಾರಿ ಬಾಂಬ್ ದಾಳಿ ನಡೆಸಿದ್ದು, 91 ಪ್ಯಾಲೆಸ್ಟೈನಿಯರು ಮೃತಪಟ್ಟು, 251 ಮಂದಿ ಗಾಯಗೊಂಡಿದ್ದಾರೆ ಎಂದು ಹಮಾಸ್ ಅಧೀನದಲ್ಲಿರುವ ಗಾಜಾ ಸರಕಾರಿ ಮಾಧ್ಯಮ ಕಚೇರಿ ತಿಳಿಸಿದೆ.


ಇತ್ತೀಚೆಗೆ ಸ್ಥಳಾಂತರಗೊಂಡವರು ಸೇರಿದಂತೆ ಸುಮಾರು 2,50,000 ಜನರನ್ನು ಹೊಂದಿರುವ ನಿರಾಶ್ರಿತರ ಶಿಬಿರದಲ್ಲಿ ನಡೆಯುತ್ತಿರುವ ಹತ್ಯೆಗಳಿಗೆ ಇಸ್ರೇಲ್ ಮತ್ತು ಯುಎಸ್ ಆಡಳಿತಗಳೇ ಸಂಪೂರ್ಣ ಹೊಣೆ ಎಂದು ಗಾಜಾ ಆಡಳಿತಾರೂಢ ಬಣ ಭಾನುವಾರ ಹೇಳಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.


ಯುಎನ್ಆರ್​ಡಬ್ಲ್ಯೂಎ ಸ್ಥಾಪಿಸಿದ ಶಾಲೆಯ ಮೇಲೆ ಮಂಗಳವಾರ ನಡೆದ ರಾಕೆಟ್​ ದಾಳಿಯೊಂದರಲ್ಲಿ ಕನಿಷ್ಠ 23 ಜನ ಸಾವಿಗೀಡಾಗಿದ್ದು, 73 ಜನ ಗಾಯಗೊಂಡ ಘಟನೆಯ ನಂತರ ಗಾಜಾದಲ್ಲಿ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಆದರೆ ಆ ಸ್ಥಳದಲ್ಲಿ ಸಕ್ರಿಯ ಭಯೋತ್ಪಾದಕರು ಇರುವ ಬಗ್ಗೆ ನಿಖರ ಗುಪ್ತಚರ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ದಾಳಿಯನ್ನು ಸಮರ್ಥಿಸಿಕೊಂಡಿದೆ.


ಕಳೆದ 24 ಗಂಟೆಗಳಲ್ಲಿ, ಇಸ್ರೇಲ್ ಮಿಲಿಟರಿಯ ದಾಳಿಯಲ್ಲಿ 64 ಜನ ಸಾವಿಗೀಡಾಗಿದ್ದು, 105 ಜನ ಗಾಯಗೊಂಡಿದ್ದಾರೆ. ಕಳೆದ ಅಕ್ಟೋಬರ್​ನಲ್ಲಿ ಪ್ಯಾಲೆಸ್ಟೈನ್-ಇಸ್ರೇಲ್ ಸಂಘರ್ಷ ಪ್ರಾರಂಭವಾದಾಗಿನಿಂದ ಒಟ್ಟು ಸಾವಿನ ಸಂಖ್ಯೆ 38,983 ಕ್ಕೆ ಮತ್ತು ಗಾಯಗೊಂಡವರ ಸಂಖ್ಯೆ 89,727 ಕ್ಕೆ ತಲುಪಿದೆ ಎಂದು ಗಾಜಾ ಮೂಲದ ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್