LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

3 ವರ್ಷಗಳ ಹಿಂದೆ ತಯಾರಾದ ಜಿಲೆಟಿನ್ ಕಡ್ಡಿಗಳು ; FSL ತಜ್ಞರಿಂದ ಪ್ರಾಥಮಿಕ ವರದಿ

ಬೆಂಗಳೂರು, 

ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಪ್ರಾಥಮಿಕ ವರದಿ ನೀಡಿದ್ದಾರೆ. ತನಿಖೆಯ ವೇಳೆ ಕೃತ್ಯಕ್ಕೆ ಬಳಸಲಾದ ವಸ್ತುಗಳ ಬಗ್ಗೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ.

ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸುಮಾರು 3 ವರ್ಷಗಳ ಹಿಂದೆ ತಯಾರಾದವುಗಳಾಗಿವೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಸಂಗ್ರಹಿಸದ ಕಾರಣ, ಪತ್ತೆಯಾದ ಸಂದರ್ಭದಲ್ಲಿ ಅವು ಸ್ಫೋಟಗೊಳ್ಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಜಿಲೆಟಿನ್ ಜೊತೆಗಿದ್ದ ವೈರ್ ಮತ್ತು ಎಲೆಕ್ಟ್ರಿಕ್ ವಸ್ತುಗಳು ಸುಮಾರು 1 ವರ್ಷದ ಹಿಂದೆ ತಯಾರಾಗಿರುವ ಸಾಧ್ಯತೆಯಿದೆ. ಗಡಿಯಾರಕ್ಕೆ ಬಳಸುವ ವೈರ್ ಮತ್ತು ಶೆಲ್ (ಬ್ಯಾಟರಿ) ಗಳನ್ನು ಒಂದು ಬಾಕ್ಸ್‌ನಲ್ಲಿ ವ್ಯವಸ್ಥಿತವಾಗಿ ಇರಿಸಲಾಗಿತ್ತು.

ಈ ವಸ್ತುಗಳನ್ನು ಸೂಕ್ತ ತಾಂತ್ರಿಕ ಜ್ಞಾನದೊಂದಿಗೆ ಜೋಡಣೆ ಮಾಡಿದ್ದರೆ, ಭಾರಿ ಪ್ರಮಾಣದಲ್ಲಿ ಸ್ಫೋಟಗೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದವು. ಆದರೆ ಮೇಲ್ನೋಟಕ್ಕೆ ಇವು ಅಸಮರ್ಪಕವಾಗಿ ಇರಿಸಲ್ಪಟ್ಟಿದ್ದವು. ಜನರಲ್ಲಿ ಮತ್ತು ಭದ್ರತಾ ಸಂಸ್ಥೆಗಳಲ್ಲಿ ಭಯ ಹಾಗೂ ಆತಂಕ ಸೃಷ್ಟಿಸುವ ಉದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ಬಲವಾಗಿದೆ.

ಕಾರಣದ ಗಂಭೀರತೆಯನ್ನು ಪರಿಗಣಿಸಿರುವ ಕರ್ನಾಟಕ ಗೃಹ ಸಚಿವರು ಮತ್ತು ಪೊಲೀಸರು, ಈಗಾಗಲೇ ಓರ್ವ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು, ಆಗ್ನೇಯ ವಿಭಾಗದ ಪೊಲೀಸರು ಹಾಗೂ ಸಿಸಿಬಿ (CCB) ಸೇರಿದಂತೆ ಆರು ವಿಶೇಷ ತಂಡಗಳು ತನಿಖೆ ನಡೆಸುತ್ತಿವೆ. ಅಲ್ಲದೆ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೂಡ ಈ ತನಿಖೆಯಲ್ಲಿ ಕೈಜೋಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್