LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗಿಲ್ಲಿ ನಟ ನಟಿಸಿರುವ ಚಿತ್ರ ಸರ್ಕಾರಿ ಶಾಲೆ-H 8 - ತೆರೆಗೆ 

ಸಸ್ಪೆನ್ಸ್,  ಥ್ರಿಲ್ಲರ್ ಜಾನರ್ ಕಥಾಹಂದರ ಹೊಂದಿರುವ ಚಿತ್ರ 'ಸರ್ಕಾರಿ ಶಾಲೆ- H 8'  ಇಂದು ರಾಜ್ಯಾದ್ಯಂತ ತೆರೆಕಂಡಿದೆ.

 ಜನಪ್ರಿಯ ಹಾಸ್ಯಕಲಾವಿದ  ಬಿಗ್ ಬಾಸ್ ವಿಜೇತ ಗಿಲ್ಲಿ ನಟ ಪ್ರಮುಖ ಪಾತ್ರಲ್ಲಿ ನಟಿಸಿರುವ ಈ ಚಿತ್ರಕ್ಕೆ ಗುಣ ಹರಿಯಬ್ಬೆ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗಿರಿಚಂದ್ರ ಪ್ರೊಡಕ್ಷನ್ಸ್ ಮೂಲಕ ತೇಜಸ್ವಿನಿ ಎಸ್.  ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಪ್ರಾರಂಭದಿಂದಲೂ ಕುತೂಹಲ ಕೆರಳಿಸುತ್ತಲೇ ಸಾಗುವ 'ಸರ್ಕಾರಿ ಶಾಲೆ- H 8' ಚಿತ್ರದ ಕಥೆ ಒಂದು ವಿಗ್ರಹದ ಸುತ್ತ ನಡೆಯುತ್ತದೆ. ಈ ಚಿತ್ರಕ್ಕೆ ಬೆಂಗಳೂರು, ಚಿತ್ರದುರ್ಗ, ಶಿರಾ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ವಿಜೇತ್ ಮಂಜಯ್ಯ ಸಂಗೀತ ಸಂಯೋಜನೆಯ 3 ಹಾಡುಗಳು ಈ ಚಿತ್ರದಲ್ಲಿದ್ದು, ಹಾಸ್ಯನಟ ಶರಣ್ ಹಾಗೂ ಮೆಹಬೂಬ್ ಸಾಬ್ ಹಾಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ರವಿ ರಾಮದುರ್ಗ ಹಾಗೂ ವೀನಸ್ ಮೂರ್ತಿ ಕ್ಯಾಮೆರಾ ವರ್ಕ್, ರವಿತೇಜ ಸಿ.ಹೆಚ್.  ಸಂಕಲನ ಈ ಚಿತ್ರಕ್ಕಿದೆ.

ಸರ್ಕಾರಿ ಶಾಲೆ- H 8'  ಚಿತ್ರದಲ್ಲಿ  ಗಿಲ್ಲಿ ನಟನೊಂದಿಗೆ ಗುಣ ಹರಿಯಬ್ಬೆ, ಮೇಘಶ್ರೀ, ಜನಪದ ಕಲಾವಿದ ಮೋಹನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಉಳಿದಂತೆ ಹಿರಿಯನಟ ರಾಘವೇಂದ್ರ ರಾಜ್ ಕುಮಾರ್, ಸುಚೇಂದ್ರ ಪ್ರಸಾದ್ , ಜಗಪ್ಪ, ನವಾಜ್, ಸುಶ್ಮಿತ ಜಗಪ್ಪ, ಕಡ್ಡಿ ವಿಶ್ವ, ಜೋತಿರಾಜ್, ನಮ್ರತಾ  ನಟಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್