LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ಕಾರಕ್ಕೆ ರೈತರ ಬಗ್ಗೆ ಕರುಣೇನೇ ಇಲ್ಲ - ಆರ್.ಅಶೋಕ್ ವಾಗ್ದಾಳಿ

ಬಳ್ಳಾರಿ:30: ಪ್ರಸಕ್ತ ವರ್ಷ ಮುಂಗಾರು ಮುನಿಸಿಕೊಂಡ ಹಿನ್ನೆಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದ ಬರ  ಅಧ್ಯಯನ ತಂಡದ ಸದಸ್ಯರು ಗಣಿನಾಡು ಬಳ್ಳಾರಿ ಜಿಲ್ಲೆಯ ಸಿದಗಿನಮೊಳ ಗ್ರಾಮದ ರೈತರ ಜಮೀನುಗಳಿಗೆ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಕಾರೆಕಲ್ಲು ಸೇರಿದಂತೆ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ, ಹತ್ತಿ, ತೊಗರಿ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ 
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಮಾತನಾಡಿ,  ಪ್ರಸಕ್ತ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆ ದೇಶಕ್ಕೆ ಅಣ್ಣ ನೀಡುವ ರೈತರ ಸಂಕಷ್ಟ ಹೇಳತೀರದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕರುಣನೇ ಇಲ್ಲ,  ದೆಹಲಿಯಲ್ಲಿ ಮಜಾ ಉಡಾಯಿಸುತ್ತಿದ್ದಾರೆ, ಕಾವೇರಿ ನೀರು ಬಿಡುಗಡೆ ಕುರಿತು ಗಮನಹರಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಜಿಲ್ಲೆ ಸೇರಿ ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಜನ ಕೂಲಿ ಅರೆಸಿ ಗುಳೆ ಹೊರಟಿದ್ದಾರೆ, 3-4 ಅಡಿ ಎತ್ತರಕ್ಕೆ ಬೆಳೆಯಬೇಕಾಗಿದ್ದ ಜೋಳ, ತೊಗರಿ, 50 ದಿನಗಳು ಕಳೆದರೂ ಮೇಲಕ್ಕೆದ್ದಲ್ಲ,
ಸಂಕಷ್ಟದಲ್ಲಿರುವ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ. ಅಧ್ಯಯನ ಮಾಡಿ ಸರ್ಕಾರ ಬರ ಘೋಷಣೆ ಮಾಡಿಲ್ಲ.  ಡಿಸಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಕೂಡಲೇ ರೈತರಿಗೆ ಸಮರ್ಪಕ ಪರಿಹಾರ ವಿತರಿಸಬೇಕು, ಬರ ಘೋಷಣೆ ಮಾಡಬೇಕು,  ಜನರಿಗೆ ಕುಡಿವ ನೀರಿನ ಬವಣೆ ತಪ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ, ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಶಾಸಕ ಕೃಷ್ಣಾ ನಾಯಕ, ಮಾಜಿ ಸoಸದ ಸಣ್ಣ ಫಕೀರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ, ಕೆ.ಎಸ್.ದಿವಾಕರ್, ಬಂಗಾರು ಹನುಮಂತು, ಎಸ್.ಗುರುಲಿಂಗನ ಗೌಡ, ಧರಪ್ಪ ನಾಯಕ್, ಜಿ.ಟಿ.ಪಂಪಾಪತಿ, ಕೆ.ರಾಮಲಿಂಗಪ್ಪ, 
ಶಿವಾರೆಡ್ಡಿ, ಅಡವಿಸ್ವಾಮಿ ಸೇರಿದಂತೆ ಇತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್